ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಜೆ 6ರ ನಂತರ ಮೈಸೂರು ನಗರದಲ್ಲಿ ಮೆಡಿಕಲ್ ಶಾಪ್, ಡಾಕ್ಟರ್ ಶಾಪ್ ಹೊರತು ಪಡಿಸಿ, ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿ ನಗರ ಪೊಲೀಸ್ ಆಯುಕ್ತ ಚಂದ್ರ ಗುಪ್ತ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಲಾಕ್ ಡೌನ್ ನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದಿದ್ದರೂ ನಗರದ ರಸ್ತೆಗಳಲ್ಲಿ ಜನರು ಹೆಚ್ಚಾಗಿ ಓಡಾಡುತ್ತಲೇ ಇದ್ದಾರೆ. ಹಾಗಾಗಿ ಜನರ ಓಡಾಟ ತಡೆಗಟ್ಟಲು ಭಾನುವಾರ ಸಂಜೆಯಿಂದ ಲಾಕ್ ಡೌನ್ ಅವಧಿ ಮುಗಿಯುವ ತನಕ ಪ್ರತಿ ದಿನ ಸಂಜೆ 6ಗಂಟೆಯಿಂದ ದಿನಸಿ, ತರಕಾರಿ ಸೇರಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುವುದು. ಅಲ್ಲದೆ ರಸ್ತೆ ಯಲ್ಲಿ ಸಂಚರಿಸುವವರನ್ನು ಬಂಧಿಸಿ, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ