Saturday, June 25, 2022

Latest Posts

ಕೊರೋನಾ ಹಬ್ಬುವ ಭೀತಿ| ಮಹಾರಾಷ್ಟ್ರ-ದೆಹಲಿ ರೈಲು, ವಿಮಾನ ಸೇವೆ ಸ್ಥಗಿತಕ್ಕೆ ಚಿಂತನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಮಹಾರಾಷ್ಟ್ರ ಹಾಗೂ ದೆಹಲಿ ರಾಜ್ಯಗಳ ನಡುವಿನ ರೈಲು ಮತ್ತು ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ರೈಲು ಹಾಗೂ ವಿಮಾನಗಳಲ್ಲಿ ಪ್ರಯಾಣಿಕರ ಓಡಾಟದಿಂದ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಗಳಿದ್ದು, ಕೊರೋನಾ ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಳ್ಳುವ ಆಲೋಚನೆಯಲ್ಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ 5.17 ಲಕ್ಷ ಕೊರೋನಾ ಸೋಂಕಿತರಿದ್ದು, 8,159 ಮಂದಿ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ 17,68,695 ಪ್ರಕರಣಗಳಿದ್ದು, 46,511 ಮಂದಿ ಕೊರೋನಾಗೆ ಸಾವನ್ನಪ್ಪಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss