Monday, July 4, 2022

Latest Posts

ಕೊರೋನಾ ಹರುಡುವಿಕೆ ತಡೆಯಲು ಆ.19ರಂದು ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು: ಮಹಾಮಾರಿ ಕೊರೋನಾ ವೈರಾಣು ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆ.19 ರಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಆ.19ರಂದು ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆದರೆ ಆ ದಿನದಂದು ಬೆಟ್ಟದಲ್ಲಿರುವ ಜನರ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿರಲಿದ್ದು ಖಾಸಗಿ, ಸಾರ್ವಜನಿಕ ವಾಹನ ಸಂಚಾರವನ್ನು ಸಹ ನಿಷೇಧಿಸಿದ್ದಾರೆ. ಇನ್ನು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನಕ್ಕೂ ಪ್ರವೇಶ, ಆ.19 ಮತ್ತು ಆ.21ರ ಸ್ವರ್ಣಗೌರಿ ವೃತಾಚರಣೆಯಂದು ದೇವಿ ದರ್ಶನಕ್ಕೆ ನಿಷೇಧಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss