Tuesday, June 28, 2022

Latest Posts

ಕೊರೋನಾ ಹೆಮ್ಮಾರಿಗೆ ಬಳ್ಳಾರಿಯಲ್ಲಿ ಮತ್ತಿಬ್ಬರ ಬಲಿ: ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನೋವೆಲ್ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಬ್ಬರು ಗುರುವಾರ ಬಲಿಯಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಹೆಮ್ಮಾರಿ ಕೊರೋನಾ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಾರದಾಗಿದೆ. ಸಂಡೂರು ತಾಲೂಕಿನ ಯಶವಂತ ನಗರ ಪಟ್ಟಣದ 43ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ನಗರದ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇದಕ್ಕೂ ಮುನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಸೊಂಕು ಇರುವುದು ದೃಡಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಗರದ ದೇವಿನಗರ ಬಡಾವಣೆಯ 75 ವರ್ಷದ ಮಹಿಳೆ ಸೊಂಕಿಗೆ ಬಲಿಯಾಗಿದ್ದಾರೆ. ನೆಗಡಿ, ಕೆಮ್ಮು, ಉಸಿರಾಟದ ತೊಂದರೆಯಿಂದ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪತ್ತೆಯಾದ 930 ಪ್ರಕರಣಗಳಲ್ಲಿ 31 ಜನ ಸೊಂಕಿತರು ಮೃತಪಟ್ಟಿದ್ದು, 409 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 492 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss