ಕೊರೋನಾ: 33,050ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ: ದೇಶದಲ್ಲಿ 1074 ಮಂದಿ ಬಲಿ

0
95

ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1718 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ.

ಮೇ.3ರವರೆಗೆ ಲಾಕ್ ಡೌನ್ ಜಾರಿಯಲ್ಲಿ ಇದ್ದರು ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಮ್ಮಡಿಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1718 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 33,050 ಗೆ ಏರಿಕೆಯಾಗಿದ್ದು, ಇವರಲ್ಲಿ 23,651 ಮಂದಿ ಸಕ್ರಿಯ ಸೋಂಕಿತರಿದ್ದು, ಉಳಿದಂತೆ 8,325 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೋನಾ ಮಹಾಮಾರಿಗೆ ಈಗಾಗಲೇ 1074 ಮಂದಿ ಬಲಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,915ಕ್ಕೆ ಏರಿಕೆಯಾಗಿದೆ. ಇವರಲ್ಲಿ 1,593 ಮಂದಿ ಗುಣಮುಖರಾಗಿದ್ದು, ಉಳೀದ 432 ಮಂದಿ ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದ್ದು, ಇದೀಗ ಸೋಂಕಿಗೆ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 535 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇವರಲ್ಲಿ 216 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here