Saturday, August 13, 2022

Latest Posts

ಕೊಲ್ಲಿ ರಾಷ್ಟ್ರಗಳಲ್ಲಿ ನೀಟ್ ಪರೀಕ್ಷೆ : ಕೇಂದ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ

ನವದೆಹಲಿ:  ಕೊಲ್ಲಿ ರಾಷ್ಟ್ರಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಆದರೆ ನೀಟ್ ಪರೀಕ್ಷೆ ಬರೆಯಲು ಭಾರತಕ್ಕೆಆಗಮಿಸುವ ವಿದ್ಯಾರ್ಥಿಗಳಿಗೆ ವಂದೇ ಭಾರತ್ ಮಿಷನ್ ವಿಮಾನಗಳ ಮೂಲಕ ಪ್ರಯಾಣಿಸಲು ಅನುಮತಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಸಚಿವಾಲಯಗಳನ್ನು ಸಂಪರ್ಕಿಸುವಂತೆ ನಾವು ಎಸ್‌ಜಿಯನ್ನು ಕೋರುತ್ತೇವೆ.” ಎಲ್ ನಾಗೇಶ್ವರ ರಾವ್, ಹೇಮಂತ್ ಗುಪ್ತ ಮತ್ತು ಎಸ್ ರವೀಂದ್ರ ಭಟ್ ಅವರ ನ್ಯಾಯಪೀಠವು ಹೇಳಿದೆ. ಮಧ್ಯಪ್ರಾಚ್ಯದ ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ವಿಮಾನಗಳಲ್ಲಿ ಭಾರತಕ್ಕೆ ಆಗಮಿಸಲು ಅನುಮತಿ ಇದೆ ಎಂದು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಸಚಿವಾಲಯಗಳೊಂದಿಗೆ ಮಾತನಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.

ಜಂಟಿ ಪ್ರವೇಶ ಪರೀಕ್ಷೆ (ಜೀ)ಯನ್ನು ಆನ್‌ಲೈನ್ ಮೂಲಕ ನಡೆಸಬಹುದಾದರೆ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನೂ ಆನ್‌ಲೈನ್‌ನಲ್ಲಿ ನಡೆಸುವುದನ್ನು ನೀವು ಪರಿಶೀಲಿಸಬೇಕು ಎಂದು ನ್ಯಾಯಾಲಯವು ಹೇಳಿತು.

ಸಾಗರೋತ್ತರ ನೀಟ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವಂತೆ ಕೋರಿ ವಿದೇಶಗಳಲ್ಲಿ ವಾಸವಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರೆಯಲು ಭಾರತಕ್ಕೆ ಬರಲು ಸಾಧ್ಯವಿಲ್ಲದ್ದರಿಂದ ಜೀ ವಿದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೊಂದಿರುವಂತೆ ನೀಟ್ ಕೂಡ ಅಂತಹ ಕೇಂದ್ರಗಳನ್ನು ಹೊಂದಿರಬೇಕು ಎಂದು ಅರ್ಜಿದಾರರು ವಾದಿಸಿದ್ದರು.

ಈ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಭಾರತಕ್ಕೆ ಬರಲು ಅವಕಾಶ ನೀಡಬಹುದು ಎನ್ನುವುದನ್ನು ಸಂಬಂಧಿಸಿದ ಸಚಿವಾಲಯಗಳಿಗೆ ತಿಳಿಸಿ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಾಲಯವು ಸೂಚಿಸಿತು.

ಕ್ವಾರಂಟೈನ್ ಷರತ್ತುಗಳಿಗೆ ಒಪ್ಪಿಕೊಂಡು,ತಾವು ಪರೀಕ್ಷೆಯ ಉದ್ದೇಶದಿಂದಲೇ ಭಾರತಕ್ಕೆ ಬರುತ್ತಿದ್ದೇವೆ ಎನ್ನುವುದನ್ನು ವಿದ್ಯಾರ್ಥಿಗಳು ಸಾಬೀತುಗೊಳಿಸಿದರೆ ನ್ಯಾಯಾಲಯದ ಸೂಚನೆಯನ್ನು ಪಾಲಿಸಬಹುದಾಗಿದೆ ಎಂದು ಮೆಹ್ತಾ ತಿಳಿಸಿದರು.

ಕ್ವಾರಂಟೈನ್ ಷರತ್ತುಗಳನ್ನು ಸಡಿಲಿಸುವ ಬಗ್ಗೆ ತಾನು ನಿರ್ದೇಶ ಹೊರಡಿಸುವಂತಿಲ್ಲ ಎಂದು ನ್ಯಾಯಾಲಯವು ಹೇಳಿತಾದರೂ,ಈ ವಿಷಯವನ್ನು ಪರಿಶೀಲಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss