ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಳವಾದ ಕೋಮಾದಲ್ಲಿದ್ದಾರೆ ಎಂದು ಸೇನೆ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆ ವೈದ್ಯಕೀಯ ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದೆ.
ಪ್ರಣವ್ ಮುಖರ್ಜಿ ಅವರಿಗೆ ಶ್ವಾಸಕೋಶದ ಸೋಂಕಿನ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೂತ್ರಪಿಂಡಗಳ ಕಾರ್ಯಕ್ಷಮತೆ ನಿನ್ನೆಯಿಂದ ಏರುಪೇರಾಗಿದೆ. ಅವರು ಕೋಮಾದಲ್ಲಿಯೇ ಇದ್ದು, ವೆಂಟಿಲೇಟರ್ ಅಳವಡಿಕೆಯನ್ನು ಮುಂದುವರಿಸಲಾಗಿದೆ’ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.
ಪ್ರಣಬ್ ಮುಖರ್ಜಿಯವರು ಈ ತಿಂಗಳ ಆರಂಭದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದಕ್ಕೂ ಮೊದಲು ಕೊರೋನಾ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ಇರುವುದು ದೃಢವಾಗಿತ್ತು.