ಕೋಲಾರ: ಜಿಲ್ಲೆಯಲ್ಲಿ ಗುರುವಾರ 4 ಕೊರೋನಾ ಸೋಂಕಿನ ಹೊಸ ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ೮೪ಕ್ಕೆ ಏರಿದೆ. ಇದರಲ್ಲಿ 36 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 48 ಆಗಿದೆ. ತುರ್ತು ನಿಗಾ ಘಟಕದಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈಗ ಪ್ರಸ್ತುತ 1399 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 10428 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 9855 ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ.
ಇಂದು ಪತ್ತೆಯಾದ ನಾಲ್ವರು ರೋಗಿಗಳ ಪೈಕಿ ಇಬ್ಬರು ಕೋಲಾರ, ಕೆಜಿಎಫ್ ಮತ್ತು ಶ್ರೀನಿವಾಸಪುರ ತಲಾ ಒಂದೊಂದು ಆಗಿದ್ದಾರೆ.
ಕೆಜಿಎಫ್ನ 16 ವರ್ಷದ ಯುವತಿ ಸೋಂಕಿತಳಾಗಿದ್ದು, ಸೋಂಕಿತ ಪ್ರವಾಸದ ಹಿನ್ನಲೆಯ ಕುರಿತು ತನಿಖೆ ನಡೆಸಲಾಗುತ್ತಿದೆ.
ಶ್ರೀನಿವಾಸಪುರದ 23 ವರ್ಷದ ಮಹಿಳೆ, ಕೋಲಾರದಲ್ಲಿ 45 ವರ್ಷದ ಪುರುಷ ಹಾಗೂ 24 ವರ್ಷದ ಆರೋಗ್ಯ ಕಾರ್ಯಕರ್ತೆ ಸೋಂಕಿತರಾಗಿದ್ದ, ಆರೋಗ್ಯ ಕಾರ್ಯಕರ್ತೆಯನ್ನು ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಉಳಿದ ಮೂವರನ್ನು ಕೋವಿಡ್ ಜಿಲ್ಲಾ ಎಸ್ಎನ್ಆರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೂ ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಸೋಂಕಿತರು ಇದ್ದ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಪೊಲೀಸರು ಸೀಲ್ ಡೌನ್ ಮಾಡಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ಸೋಂಕಿತ ಬಿಡುಗಡೆಯಾಗಿಲ್ಲ.