Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಕೋಲಾರ| ಚೀನಾದಿಂದ ವಾಪಸ್ಸಾಗುವ ಕೈಗಾರಿಕೆಗಳಿಗೆ ಜಿಲ್ಲೆಯಲ್ಲಿ ಜಾಗ: ಮುನಿಸ್ವಾಮಿ

sharing is caring...!

ಕೋಲಾರ: ಕೋವಿಡ್-೧೯ರ ಹಿನ್ನಲೆಯಲ್ಲಿ ಚೀನಾದಿಂದ ಹಿಂದಿರುಗುವ ಕೈಗಾರಿಕೆಗಳಿಗೆ ಜಿಲ್ಲೆಯಲ್ಲಿ ಸ್ಥಳಾವಕಾಶ ಒದಗಿಸಲು ಜಿಲ್ಲೆಯ ವಿವಿಧೆಡೆ ಅಗತ್ಯ ಭೂಮಿ ಗುರುತಿಸಲಾಗಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮೋದಿ ೨.೦ ಸರ್ಕಾರದ ಪ್ರಥಮ ವರ್ಷದ ಸಾಧನೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಅನೇಕ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಳುಬಾಗಿಲು ಹತ್ತಿರ ೯೦೦ ಎಕರೆ, ನರಸಾಪುರ ಹಾಗೂ ವೇಮಗಲ್ ಬಳಿ ಸಾವಿರ ಎಕರೆಯಲ್ಲಿ ಕಂಪನಿಗಳು ಶುರುವಾಗಲಿದೆ. ಕೆಜಿಫ್ ನಲ್ಲಿ ಬೆಮಲ್ ಗೆ ಸೇರಿದ ೯೭೦ ಎಕರೆಯಲ್ಲಿ ಸೋಲಾರ್ ಪ್ಲಾಂಟ್ ಬಿಡಿಭಾಗಗಳ ಕಾರ್ಖಾನೆ ಶುರುವಾಗಲಿದ್ದು ಜಿಲ್ಲೆಯ ಯುವಕರ ಉದ್ಯೋಗದ ನಿವಾರಣೆಗೆ ಸಹಾಯವಾಗಲಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಜಿಲ್ಲೆಗೆ ಹತ್ತಿರವಾಗಿದ್ದು ಇಲ್ಲಿ ಕೈಗಾರಿಕೆಗಳು ಸ್ಥಾಪಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಇಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದಾರೆ ಎಂದು ಹೇಳಿದರು.
ಕೋವಿಡ್-೧೯ ಪರಿಣಾಮ ಚೀನಾ ದೇಶದಿಂದ ಹಿಂತಿರುಗುತ್ತಿರುವ ಅನೇಕ ಕೈಗಾರಿಕಾ ಕಂಪನಿಗಳು ಭಾರತದಲ್ಲಿ ನೆಲೆಯೂರಲು ಜಾಗವನ್ನು ಗುರುತಿಸಲಾಗುತ್ತಿದ್ದು, ಕೋಲಾರ ದೇಶದ ಜನರ ಹಿತ ಹಾಗು ಆರೋಗ್ಯವನ್ನು ಕಾಪಾಡುವ ಸರ್ಕಾರಗಳ ಪರವಾಗಿ ನಿಲ್ಲಬೇಕಾದ ವಿರೋಧ ಪಕ್ಷದ ನಾಯಕರು  ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಕೊರೋನಾ ಎಂಬ ಮಹಾಮಾರಿ ಇಡೀ ಪ್ರಪಂಚಕ್ಕೆ ಕಂಟಕವನ್ನು ಉಂಟು ಮಾಡಿದ್ದು, ಈ ನಿಟ್ಟಿನಲ್ಲಿ ಮೋದಿ ಸರ್ಕಾರ  ವಿಶೇಷ ಪ್ಯಾಕೇಜ್ ಘೋಷಿಸಿ ಭಾರತೀಯರ ಯೋಗ ಕ್ಷೇಮದ ಬಗ್ಗೆ ಖಾಳಜಿ ವಹಿಸುತ್ತಿರುವ  ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷದಲ್ಲಿ ಕುಳಿತ ನಾಯಕರು ಟೀಕೆ ಟಿಪ್ಪಣಿ ಮಾಡುವುದನ್ನು ಬಿಟ್ಟು  ಜನತೆಯ ಆರೋಗ್ಯದ ದೃಷ್ಟಿಯಿಂದ ಕೈ ಜೋಡಿಸಿದರೆ ೨೦೨೧ಕ್ಕೆ ಭಾರತ ಸದೃಡವಾಗಿ ನಿಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು.
ದೇಶದಲ್ಲಿ ಆರ್ಥಿಕತೆಯ ಮೇಲೆ ಆದಂತಹ ತೀವ್ರ ದುಷ್ಪರಿಣಾಮಗಳನ್ನು ಬಗೆಹರಿಸಲು ಮೋದಿ ಸರ್ಕಾರ ಎರಡು ಮಾದರಿಯ ವಿಶೇಷ ಪ್ಯಾಕೇಜ್ ಗಳನ್ನು ಅನುಷ್ಠಾನ ಗೊಳಿಸಿದರು. ಭಾರತದ ಆರ್ಥಿಕ ಪುನರುತ್ಥಾನ ಗೊಳಿಸಲು ಆತ್ಮನಿರ್ಭರ ಭಾರತ ತತ್ವದ ಆಡಿ ೨೦ ಲಕ್ಷ ಕೋಟಿ ವಿಶೇಷ ಪ್ಯಾಕೇಜ್  ಘೋಷಣೆ ಮಾಡಿದರು ಎಂದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ೮.೭ ಕೋಟಿ ರೈತರಿಗೆ ೨೦೦೦ ರೂ ನಂತೆ ನೇರ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿ ರೈತರ ಬಗ್ಗೆ ಖಾಳಜಿ ತೋರಿಸುವ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬಿದರು. ಕೊರೋನಾ ನಡುವೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು  ಜನ್ ಧನ್ ಖಾತೆ ಹೊಂದಿರುವ ಮಹಿಳೆಯರಿಗೆ ಮೂರು ತಿಂಗಳು ೫೦೦ರೂ ರಂತೆ ೩ಸಾವಿರ ಕೋಟಿ, ಉಜ್ವಲ ಯೋಜನೆಯಡಿ ೮.೨ ಕೋಟಿ, ಮಾರ್ಚ್ ೨೪ ರಂದು ಭಾರತ ಲಾಕ್ ಡೌನ್ ಘೋಷಿಸಿದ ನಂತರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ದುರ್ಬಲ ವರ್ಗದವರ ರಕ್ಷಣೆಗೆ ೧.೭ ಲಕ್ಷ ಕೋಟಿ, ಬಿಪಿಎಲ್ ಕಾರ್ಡ್ ಹೋಂದಿರುವವರಿಗೆ ಪ್ರಧಾನ ಮಂತ್ರಿ ಅನ್ನಪೂರ್ಣ ಯೋಜನೆಗೆ ಜೂನ್ ತಿಂಗಳ ಅಂತ್ಯದಲ್ಲಿ ೯೦ ಸಾವಿರ ಕೋಟಿ ಸೇರಿದಂತರ ೧.೫ ಲಕ್ಷ ಕೋಟಿ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.
ಸ್ಥಳಿಯವಾಗಿ ಎಷ್ಟು ಕಾರ್ಮಿಕರು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿರುವವರ ಅಂಕಿ ಅಂಶ ಕಲೆ ಹಾಕಿ ಅವರಿಗೆ ಉದ್ಯೋಗ ನೀಡುವ ಯೋಜನೆ ರೂಪಿಸಲಾಗುವುದು. ಕೊರೊನಾ ಇರುವುದರಿಂದ ಕೆರೆಗಳ ಸ್ವಚ್ಚತೆ ಗೊಳಿಸುವ ಕಾರ್ಯ ಕುಂಟಿತವಾಗಿದೆ. ಇದೆಲ್ಲಾ ಮುಗಿದ ಮೇಲೆ ಹಂತ ಹಂತವಾಗಿ ಕೆರೆಗಳ ಪುನಃಚ್ಚೇತನ ಮಾಡಿ ಅಭಿವೃದ್ದಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ರೆಡ್ಡಿ, ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ನಗರಘಟಕ ಅಧ್ಯಕ್ಷ ತಿಮ್ಮರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!