Wednesday, August 10, 2022

Latest Posts

ಕೋಲಾರ ಜಿಲ್ಲೆಯಲ್ಲಿ ಗುರುವಾರ 14 ಮಂದಿಗೆ ಪಾಸಿಟಿವ್, 19 ಮಂದಿ ಗುಣಮುಖ

ಹೊಸ ದಿಗಂತ ವರದಿ, ಕೋಲಾರ:

ಕೋಲಾರ ಜಿಲ್ಲೆಯಲ್ಲಿ ಗುರುವಾರ 14 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 9793 ಕ್ಕೇ ಏರಿದೆ. ಜತೆಗೆ ಒಂದೇ ದಿನ 19 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಗುಣಮುಖರಾಗಿ ಬಿಡುಗಡೆಹೊಂದಿದವರ ಸಂಖ್ಯೆ 9511 ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 103 ಆಗಿದೆ.
ತುರ್ತು ನಿಗಾ ಘಟಕದಲ್ಲಿ 5 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ ಸತ್ತವರ ಸಂಖ್ಯೆ180 ಆಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ 84225 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 255906 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 246113 ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ. 2994 ಮಂದಿಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss