Tuesday, August 9, 2022

Latest Posts

ಕೋಲಾರ ಜಿಲ್ಲೆಯಲ್ಲಿ ಬುಧವಾರ 26 ಮಂದಿಗೆ ಸೋಂಕಿತ ಪ್ರಕರಣಗಳು ಪತ್ತೆ

 ಹೊಸ ದಿಗಂತ ವರದಿ, ಕೋಲಾರ:

ಜಿಲ್ಲೆಯಲ್ಲಿ ಬುಧವಾರ 26 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 9779 ಕ್ಕೇ ಏರಿದೆ. ಜತೆಗೆ ಒಂದೇ ದಿನ 19 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಗುಣಮುಖರಾಗಿ ಬಿಡುಗಡೆಹೊಂದಿದವರ ಸಂಖ್ಯೆ 9494 ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 106 ಆಗಿದೆ.
ತುರ್ತು ನಿಗಾ ಘಟಕದಲ್ಲಿ 21 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ ಸತ್ತವರ ಸಂಖ್ಯೆ 179 ಆಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ 84099 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 253207 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 243428  ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ. 2994 ಮಂದಿಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss