ಹೊಸ ದಿಗಂತ ವರದಿ, ಕೋಲಾರ:
ಜಿಲ್ಲೆಯಲ್ಲಿ ಬುಧವಾರ ಕೇವಲ 6 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ9896 ಕ್ಕೇ ಏರಿದೆ. ಜತೆಗೆ 15 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಗುಣಮುಖರಾಗಿ ಬಿಡುಗಡೆಹೊಂದಿದವರ ಸಂಖ್ಯೆ 9603 ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 116 ಆಗಿದೆ.
ತುರ್ತು ನಿಗಾ ಘಟಕದಲ್ಲಿ 15 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ ಸತ್ತವರ ಸಂಖ್ಯೆ 180 ಆಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ 85134 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 275757 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 262782 ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ. 1810 ಮಂದಿಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.