Sunday, June 26, 2022

Latest Posts

ಕೋಲಾರ ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲ: ಸಚಿವ ನಾಗೇಶ್

ಕೋಲಾರ: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವ ಪ್ರಮಾಣ ಕಡಿಮೆ ಇದ್ದು, ಲಾಕ್‌ಡೌನ್ ಮಾಡಲಾಗುವುದಿಲ್ಲವೆಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.
ನಗರದ ಡಿಸಿ ಕಚೇರಿಯಲ್ಲಿ ಸೋಮವಾರ ಲಾಕ್‌ಡೌನ್ ಕುರಿತಂದೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹಾಗೂ ಸಚಿವರು ವೀಡಿಯೋ ಕಾನ್‌ರೆನ್ಸ್‌ನಲ್ಲಿ ಮಾತನಾಡಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ವೀಡಿಯೋ ಕಾನ್‌ರೆನ್ಸ್‌ನಲ್ಲಿ ವ್ಯಕ್ತವಾದ ಮಾಹಿತಿಯಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಾಧ್ಯತೆ ಇದ್ದು, ಕೋಲಾರ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರೆಯಲಿದೆಯೆಂದು ವಿವರಿಸಿದರು.
ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ನಾಲ್ಕು ಸಾವಿರ ಬೆಡ್‌ಗಳನ್ನು ಸಜ್ಜುಗೊಳಿಸಿರುವುದಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇವೆ, ಹಾಗೆಯೇ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ, ಈವರೆವಿಗೂ ಸತ್ತಿರುವ ನಾಲ್ವರು ಜಾಲಪ್ಪ ಆಸ್ಪತ್ರೆಯಲ್ಲಿಯೇ ಮರಣ ಹೊಂದಿದ್ದಾರೆ. ಆದ್ದರಿಂದ ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಆಸ್ಪತ್ರೆಗೆ ನೋಟೀಸ್ ಜಾರಿ ಮುತುವರ್ಜಿಯಿಂದ ಚಿಕಿತ್ಸೆ ನೀಡಲು ಸೂಚಿಸಲಾಗುವುದು ಇಲ್ಲವಾದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಕೋಲಾರ ಜಿಲ್ಲೆಯಲ್ಲಿ ಈವರೆವಿಗೂ ೩೦೨ ಪಾಸಿಟಿವ್ ಕೇಸುಗಳು ಪತ್ತೆಯಾಗಿದ್ದು, ೧೨೪ ಮಂದಿ ಗುಣಮುಖರಾಗಿದ್ದಾರೆ. ೧೭೫ ಸಕ್ರಿಯ ಪ್ರಕರಣಗಳಿವೆ, ೧೩೫ ವೆಂಟಿಲೇಟರ್‌ಗಳನ್ನು ಸಜ್ಜುಗೊಳಿಸಿದ್ದೇವೆ, ೬೩ ಆಂಬುಲೆನ್ಸ್‌ಗಳು ಸಿದ್ಧವಾಗಿವೆ ಎಂದ ಸಚಿವರು ರ‍್ಯಾಂಡಮ್ ಚೆಕ್‌ಅಪ್‌ಗೆ ಸೂಚಿಸಲಾಗಿದೆ ಎಂದರು.
ಬೆಂಗಳೂರು ಲಾಕ್‌ಡೌನ್ ಆಗಿರುವುದರಿಂದ ಜಿಲ್ಲೆಯ ಹೆದ್ದಾರಿ ಮೇಲೆ ವಾಹನಗಳ ಸಂಚಾರದ ಮೇಲೆ ನಿಗಾ ಇಡಲಾಗುವುದು, ಚೆಕ್‌ಪೋಸ್ಟ್‌ಗಳನ್ನು ಚುರುತುಗೊಳಿಸುವಂತೆ ಸೂಚಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲದಿರುವುದರಿಂದ ದಿನಸಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮಾರಾಟ ಎಂದಿನಂತಿರುತ್ತದೆ, ಮದ್ಯ ಮಾರಾಟವು ಮಾಮೂಲಿಯಾಗಿರುತ್ತದೆ. ಆದರೆ, ಲಾಕ್‌ಡೌನ್ ಆದ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಆಸ್ಪದ ಇಲ್ಲವೆಂದರು.
ಕೋಲಾರ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮನಸ್ತಾಪ ಇರುವ ಕುರಿತು ಇಬ್ಬರನ್ನು ಕೂರಿಸಿ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಳೇಶ್ವರ್ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇರಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss