ಕೋಲಾರ: ಜಿಲ್ಲೆಯಲ್ಲಿ ಶುಕ್ರವಾರ ೮೮ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ ೧೭೪೧ ಕ್ಕೆ ಏರಿದೆ. ಜತೆಗೆ ಇಂದು ೧೬ ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇಂದು ಪಾಸಿಟೀವ್ ಬಂದಿರುವ ಎಲ್ಲರೂ ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯ ಹಾಗೂ ಇಂದಿನಿಂದ ತಾಲೂಕು ಕೇಂದ್ರಗಳಲ್ಲಿ ಆರಂಭವಾಗಿರುವ ಹಾಸ್ಟೆಲ್ ಕಟ್ಟಗಳಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.
ಕೋಲಾರ ತಾಲೂಕಿನಲ್ಲಿ ೩೩, ಮಾಲೂರು ೨೯, ಬಂಗಾರಪೇಟೆ ೭, ಕೆಜಿಎಫ್ನಲ್ಲಿ೧೨, ಮುಳಬಾಗಿಲಿನಲ್ಲಿ ೫, ಶ್ರೀನಿವಾಪುರದಲ್ಲಿ ೨ ಪಾಸಿಟೀವ್ ಪ್ರಕರಣ ವರದಿಯಾಗಿದೆ.
ಇಂದು ೧೬ ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ ೮೪೨ ಆಗಿದೆ.
ಮಾಲೂರು ತಾಲೂಕಿನಿಂದ ೩ ಬಂಗಾರಪೇಟೆ ೧, ಕೆಜಿಎಫ್ನಲ್ಲಿ ೩, ಮುಳಬಾಗಿಲು ೭, ಶ್ರೀನಿವಾಸಪುರ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೮೫೩ ಆಗಿದೆ. ತುರ್ತು ನಿಗಾ ಘಟಕದಲ್ಲಿ ೨೨ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಈವರೆಗೂ ಸತ್ತವರ ಸಂಖ್ಯೆ ೩೬ ಆಗಿದೆ. ಜಿಲ್ಲೆಯಲ್ಲಿ ಈಗ ಪ್ರಸ್ತುತ ೧೫೬೯೯ ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ೨೮೬೫೩ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೫೭೧೩ ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ.