Wednesday, August 10, 2022

Latest Posts

ಕೋಲಾರ ಜಿಲ್ಲೆಯಲ್ಲಿ ಶುಕ್ರವಾರ 53 ಮಂದಿಗೆ ಸೋಂಕು ದೃಢ, 20 ಮಂದಿ ಗುಣಮುಖ, ಮೂರು ಸಾವು

ಕೋಲಾರ:  ಜಿಲ್ಲೆಯಲ್ಲಿ ಶುಕ್ರವಾರ ೫೩ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ ೩೨೭೬ ಕ್ಕೆ ಏರಿದೆ. ಜತೆಗೆ ಒಂದೇ ದಿನ ೨೦ ಮಂದಿ ಗುಣಮುಖರಾಗಿ ಬಿಡುಗಡೆಯಾಗಿರುವುದು ದಾಖಲೆಯಾಗಿದೆ.
ಪಾಸಿಟೀವ್ ಬಂದಿರುವ ಎಲ್ಲರೂ ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯ ಹಾಗೂ ತಾಲೂಕು ಕೇಂದ್ರಗಳಲ್ಲಿ ಆರಂಭವಾಗಿರುವ ಹಾಸ್ಟೆಲ್ ಕಟ್ಟಗಳಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.
ಕೋಲಾರ ತಾಲೂಕಿನಲ್ಲಿ ೧೬,ಮಾಲೂರು ೪, ಬಂಗಾರಪೇಟೆ ೩, ಕೆಜಿಎಫ್ ೧೬, ಮುಳಬಾಗಿಲಿನಲ್ಲಿ ೯, ಶ್ರೀನಿವಾಸಪುರದಲ್ಲಿ ೫ ಪಾಸಿಟೀವ್ ಪ್ರಕರಣ ವರದಿಯಾಗಿದೆ.
ಈವರೆಗೂ ಗುಣಮುಖರಾಗಿ ಬಿಡುಗಡೆಹೊಂದಿದವರ ಸಂಖ್ಯೆ ೨೪೮೮ ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೭೩೨ ಆಗಿದೆ. ತುರ್ತು ನಿಗಾ ಘಟಕದಲ್ಲಿ ೨೩ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಎರಡು ಸಾವು ಸೇರಿದಂತೆ ಈವರೆಗೂ ಸತ್ತವರ ಸಂಖ್ಯೆ ೫೯ ಆಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ ೨೯೩೬೭ ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ೪೫೭೩೭ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೩೩೭೧೦ ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ. ೩೪೧ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss