Wednesday, August 10, 2022

Latest Posts

ಕೋಲಾರ ಜಿಲ್ಲೆಯಲ್ಲಿ ಸೋಮವಾರ 101 ಮಂದಿಗೆ ಪಾಸಿಟಿವ್, 32 ಮಂದಿ ಬಿಡುಗಡೆ

ಕೋಲಾರ:  ಜಿಲ್ಲೆಯಲ್ಲಿ ಸೋಮವಾರ ೧೦೧ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ ೧೯೮೬ ಕ್ಕೆ ಏರಿದೆ. ಜತೆಗೆ ಇಂದು ೩೨ ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಕೋವಿಡ್ ಪಾಸಿಟೀವ್ ಆಗಿ ಇತರೆ ಅನಾರೋಗ್ಯ ಕಾರಣಗಳಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ಇಂದು ಪಾಸಿಟೀವ್ ಬಂದಿರುವ ಎಲ್ಲರೂ ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯ ಹಾಗೂ ಇಂದಿನಿಂದ  ತಾಲೂಕು ಕೇಂದ್ರಗಳಲ್ಲಿ ಆರಂಭವಾಗಿರುವ ಹಾಸ್ಟೆಲ್ ಕಟ್ಟಗಳಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.
ಕೋಲಾರ ತಾಲೂಕಿನಲ್ಲಿ ೩೩, ಮಾಲೂರು ೧೭, ಬಂಗಾರಪೇಟೆ ೨೩, ಕೆಜಿಎಫ್ ೯, ಮುಳಬಾಗಿಲಿನಲ್ಲಿ ೧೨, ಶ್ರೀನಿವಾಪುರದಲ್ಲಿ ೭ ಪಾಸಿಟೀವ್ ಪ್ರಕರಣ ವರದಿಯಾಗಿದೆ.
ಇಂದು ೩೨ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ ೯೦೧ ಆಗಿದೆ.ಕೋಲಾರದ ನಾಲ್ವರು ಇಂದು ಬಿಡುಗಡೆಯಾಗಿದ್ದಾರೆ.
ಇಂದು ಬಿಡುಗಡೆಯಾದವರಲ್ಲಿ ಕೋಲಾರದಿಂದ ೧೦, ಮಾಲೂರು ೪, ಬಂಗಾರಪೇಟೆ ೮, ಕೆಜಿಎಫ್ ೩, ಮುಳಬಾಗಿಲು ೪, ಶ್ರೀನಿವಾಸಪುರ ೩ ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧೦೪೧ ಆಗಿದೆ. ತುರ್ತು ನಿಗಾ ಘಟಕದಲ್ಲಿ ೨೩ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಈವರೆಗೂ ಸತ್ತವರ ಸಂಖ್ಯೆ ೪೨ ಆಗಿದೆ. ಜಿಲ್ಲೆಯಲ್ಲಿ ಈಗ ಪ್ರಸ್ತುತ ೧೬೯೯೫ ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ೨೯೯೬೧ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೬೪೫೫ ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss