Saturday, July 2, 2022

Latest Posts

ಕೋಲಾರ ಜಿಲ್ಲೆಯಲ್ಲಿ 71 ಮಂದಿಗೆ ಸೋಂಕಿತ ಪ್ರಕರಣಗಳು ಪತ್ತೆ, 34 ಮಂದಿ ಬಿಡುಗಡೆ

ಕೋಲಾರ: ಜಿಲ್ಲೆಯಲ್ಲಿ ಶನಿವಾರ ೭೧ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ ೨೩೨೪ ಕ್ಕೆ ಏರಿದೆ. ಜತೆಗೆ ೫೬ ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಪಾಸಿಟೀವ್ ಬಂದಿರುವ ಎಲ್ಲರೂ ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯ ಹಾಗೂ ತಾಲೂಕು ಕೇಂದ್ರಗಳಲ್ಲಿ ಆರಂಭವಾಗಿರುವ ಹಾಸ್ಟೆಲ್ ಕಟ್ಟಗಳಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.
ಕೋಲಾರ ತಾಲೂಕಿನಲ್ಲಿ ೨೬, ಮಾಲೂರು ೯, ಬಂಗಾರಪೇಟೆ ೫, ಕೆಜಿಎಫ್ ೧೦, ಮುಳಬಾಗಿಲಿನಲ್ಲಿ೧೭, ಶ್ರೀನಿವಾಪುರದಲ್ಲಿ ೪ ಪಾಸಿಟೀವ್ ಪ್ರಕರಣ ವರದಿಯಾಗಿದೆ.
ಇಂದು ೫೬ ಮಂದಿ ಗುಣಮುಖರಾಗಿ ಬಿಡುಗಡೆಹೊಂದಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ ೧೧೦೮ ಆಗಿದೆ.
ಇಂದು ಬಿಡುಗಡೆಯಾದವರಲ್ಲಿ ಕೋಲಾರದಿಂದ ೨೪, ಮಾಲೂರು ೨೨, ಬಂಗಾರಪೇಟೆ ೪, ಕೆಜಿಎಫ್ ೫, ಮುಳಬಾಗಿಲಿನಲ್ಲಿ ಒಬ್ಬರು  ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧೧೭೨ ಆಗಿದೆ. ತುರ್ತು ನಿಗಾ ಘಟಕದಲ್ಲಿ ೩೩ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಈವರೆಗೂ ಸತ್ತವರ ಸಂಖ್ಯೆ ೪೬ ಆಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ ೨೦೯೫೪ ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ೩೫೩೩೨ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೯೬೫೭ ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss