ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಊರ ಹೊರಗೆ ಜಮೀನು ಗುರುತಿಸಲು ಶೀಘ್ರ ಆದೇಶ: ಸಚಿವ ಶ್ರೀರಾಮುಲು

0
18

ಚಿಕ್ಕಬಳ್ಳಾಪುರ: ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಊರ ಹೊರಗಡೆ ಎರಡು ಎಕರೆ ಜಮೀನು ಗುರುತಿಸುವಂತೆ ಶೀಘ್ರದಲ್ಲೇ ಆದೇಶ ಮಾಡುವೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ಕೋವಿಡ್‌ ಸೋಂಕಿತರ ಶವಗಳ ಅಂತ್ಯಕ್ರಿಯೆ ವಿಚಾರವಾಗಿ ದೂರುಗಳು ಬರುತ್ತಿವೆ. ಅದರಲ್ಲೂ ನಗರ ವ್ಯಾಪ್ತಿಯಲ್ಲಿ ಆಕ್ಷೇಪಣೆಗಳು ಹೆಚ್ಚಿವೆ’ ಎಂದು ತಿಳಿಸಿದರು. ಶವಸಂಸ್ಕಾರದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶದ ಮಾದರಿಯಲ್ಲಿ ಊರ ಹೊರಗೆ ಸುಮಾರು ಎರಡು ಎಕರೆ ಜಾಗ ಗುರುತಿಸಿ ಅಲ್ಲೇ ಸೋಂಕಿತರ ಶವಗಳ ಅಂತ್ಯಕ್ರಿಯೆ ಮಾಡುವಂತೆ ಬೆಂಗಳೂರಿಗೆ ಹೋದ ತಕ್ಷಣ ಆದೇಶಿಸುವೆ ಎಂದರು. ಕೋವಿಡ್ ಸೋಂಕಿತರ ಹೆಚ್ಚಳದಿಂದ ಮುಂದೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 10 ಸಾವಿರ ಹಾಸಿಗೆಗಳನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here