Saturday, August 13, 2022

Latest Posts

ಕೋವಿಡ್‌ನಿಂದ ಸಾವಿನ ಪ್ರಮಾಣ ಹೆಚ್ಚುತ್ತಿರುವುದಕ್ಕೆ ಕಾರಣ ತಿಳಿಯಲು ಸಮಿತಿ ರಚನೆಯಾಗಬೇಕು: ಅಶ್ವಥ್‌ನಾರಾಯಣ ಸೂಚನೆ

ಬೆಂಗಳೂರು: ದಿನೇ ದಿನೇ ಕೊರೋನಾ ಸೋಂಕಿನಿಂದ ಸಿಲಿಕಾನ್ ಸಿಟಿಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಮುಖ್ಯ ಕಾರಣ ಏನು ಎಂಬುದನ್ನು ತಿಳಿಯಬೇಕು. ನಿಖರವಾದ ಕಾರಣ ತಿಳಿಯಲು ಉನ್ನತ ಮಟ್ಟದ ಸಮಿತಿ ರಚಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್‌ನಾರಾಯಣ ಸೂಚಿಸಿದ್ದಾರೆ.

ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್‌ನಿಂದ ನಗರದಲ್ಲಿ ಭಾಗದಲ್ಲಿ ಏಕೆ ಹೆಚ್ಚಿನ ಸಾವಾಗುತ್ತಿದೆ ಎಂಬುದನ್ನು ತಿಳಿಯಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕು. ಆ ಸಮಿತಿಯು ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸೂಕ್ತ ಕಾರಣ ಏನು ಎಂಬುದನ್ನು ಎಲ್ಲಾ ರೀತಿಯಲ್ಲಿಯೂ ಕೂಲಂಕುಶವಾಗಿ ಸರ್ವೆ ಮಾಡಿ ಮಾಹಿತಿ ನೀಡಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss