ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದರೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ.
ಇದರ ನಡುವೆ ಜೆಲ್ಲೆಯನ್ನು ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ನ ಲ್ಯಾಬ್ ನಲ್ಲಿ ಕೋವಿಡ್ ಟೆಸ್ಟ್ ಮಾಡುವವರಿಗೆ ಗುರುವಾರ ಕೊರೊನಾ ಇರುವುದು ದೃಢಪಟ್ಟಿದೆ.
ಕೊರೋನಾ ಟೆಸ್ಟ್ ಮಾಡುವ ಪೆಥಾಲಜಿಸ್ಟ್ ಗೆ ಕೊರೊನಾ ಪಾಸಿಟಿವ್ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.ವೈದ್ಯರು, ದಾದಿಯರು, ಪೋಲಿಸರು ಸೇರಿದಂತೆ ಕೊರೋನಾ ವಾರಿಯರ್ಸ್ ಗಳನ್ನು ಕೊರೋನಾ ಎಡೆಬಿಡದೆ ಕಾಡುತ್ತಿದೆ.