Wednesday, August 17, 2022

Latest Posts

ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವರ ಮೆಚ್ಚುಗೆ

ಮಂಗಳೂರು: ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಕೇಂದ್ರ ಸಚಿವ ಹರ್ಷವರ್ಧನ್ ಅವರು ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಲಾಕ್ ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್ ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್ ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್ ವಿಷಯದಲ್ಲಿ ಈಗಾಗಲೇ ಕೆಲ ಸೂಚನೆ ನೀಡಲಾಗಿದೆ. ಆ ಬಗ್ಗೆಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!