ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಪರಿಸ್ಥಿತಿಯ ವಿವರಗಳನ್ನು ಪಡೆದರು.
ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ (ರಾಜಸ್ಥಾನ), ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳ), ಉದ್ಧವ್ ಠಾಕ್ರೆ (ಮಹಾರಾಷ್ಟ್ರ), ಭೂಪೇಶ್ ಬಘೇಲ್ (ಛತ್ತೀಸಗಡ) ಮತ್ತು ವಿಜಯ್ ರೂಪಾಣಿ (ಗುಜರಾತ್) ಅವರು ವಿಡಿಯೊ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದರೂ ಕೆಲವೊಂದು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತದೆ. ಹಾಗಾಗಿ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಕೊರೋನಾ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಿಯವರು ಕರ್ಫ್ಯೂ ಜಾರಿ ಕುರಿತು ಸಹ ಸಮಾಲೋಚನೆ ನಡೆಸಿದ್ದಾರೆ.
ಕೋವಿಡ್ ಲಸಿಕೆ ವಿತರಣೆ. ಕಾರ್ಯತಂತ್ರ ಕುರಿತಂತೆಯೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆಗೂ ಪ್ರಧಾನಿ ಮೋದಿ ಚರ್ಚಿಸಿ, ಅಭಿಪ್ರಾಯಪಡೆದರು.