Saturday, July 2, 2022

Latest Posts

ಕೋವಿಡ್ ನಿಯಂತ್ರಣ: ಧಾರವಾಡ ಸಿಇಓ ಜೊತೆ ಮುಖ್ಯಮಂತ್ರಿಗಳ ಸಂವಾದ

ಧಾರವಾಡ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧಾರವಾಡ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಗುರುವಾರ ಜಿಪಂ ಸಿಇಓ ಡಾ. ಬಿ.ಸಿ.ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಂವಾದ ನಡೆಸಿ, ಪ್ರಗತಿ ಪರಿಶೀಲನೆ ಮಾಡಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಕರ್ತವ್ಯದಲ್ಲಿರುವುದರಿಂದ ಜಿಪಂ ಸಿಇಓ ಡಾ. ಬಿ.ಸಿ.ಸತೀಶ್ ಅವರು ಜಿಲ್ಲೆಯಲ್ಲಿ ಕೊರೋನಾ  ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನ, ಸ್ವಾಬ್ಯ್ ಸಂಗ್ರಹ, ಸೋಂಕಿತರ ಚಿಕಿತ್ಸೆ ಬಗ್ಗೆ ಪರಿಣಾಮಕಾರಿ ಕ್ರಮ ಕೈಗೊಂಡಿದೆ. ಹಿರಿಯ ಅಧಿಕಾರಿಗಳ ತಂಡ ರಚಿಸಿ ಪ್ರಮುಖ ಜನಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ಮಾಡಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿರುವ ಬಗ್ಗೆ ವಿವರಿಸಿದರು.
ಅಲ್ಲದೇ, ಸಾಮಾಜಿಕ ಅಂತರ ಪಾಲನೆ ಮಾಡದವರಿಂದ ದಂಡ ಸಂಗ್ರಹದೊoದಿಗೆ ಸ್ವಾಬ್ಯ್ ಪರೀಕ್ಷೆಗೆ ಒಳಪಡಿಸುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡಕ್ಕಿoತ ಹೆಚ್ಚಾಗಿ ಜಾಗೃತಿ ಮೂಡಿಸುವ, ಅವರನ್ನು ತಪಾಸಣೆಗೆ ಒಳಪಡಿಸುವ ಕ್ರಮಕ್ಕೆ ಒತ್ತು ನೀಡುತ್ತಿದೆ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಕಿಮ್ಸ್ ನಿರ್ದೇಶಕ ಡಾ.ರಾಮಚಂದ್ರಪ್ಪ ಅಂಟರಠಾಣೆ, ಜಿಲ್ಲಾ ಆರೋಗ್ಯಾಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಕುಮಾರ್ ಮಾನಕರ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss