Saturday, July 2, 2022

Latest Posts

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಿಫಲ : ಕೆ.ಬಿ.ಕೋಳಿವಾಡ

ಹಾವೇರಿ: ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರ ಸಂಪೂರ್ಣ ವಿಫಲ. ಎರಡು ಸರ್ಕಾರಗಳ ಆಡಳಿತದಿಂದ ಜನತೆ ಭ್ರಮನಿರಸನವಾಗಿದ್ದಾರೆ ಎಂದು ವಿಧಾನಸಭೆ ಮಾಜಿ ಸಭಾಪತಿ ಕೆ.ಬಿ.ಕೋಳಿವಾಡ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ರಂಗಗಳಲ್ಲಿಯೂ ವಿಫಲವಾಗಿವೆ, ಚೀನಾದಿಂದ ಬಂದ ಕೊರೋನಾ ನಿಯಂತ್ರಣಕ್ಕೆ ಪ್ರಾರಂಭದಿಂದ ಸೂಕ್ತ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಂಡಿದ್ದರೆ ದೇಶದಲ್ಲಿ ಇಷ್ಟೊಂದು ಕೊರೋನಾ ಪ್ರಕರಣಗಲು ಮತ್ತು ಸಾವುಗಳು ಸಂಭವಿಸುತ್ತಿರಲಿಲ್ಲ. ಆನಂತರದಲ್ಲಿ ರಾಜ್ಯ ಸರಕಾರವೂ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಷ್ಟೊಂದು ಪ್ರಕರಣಗಳು ಆಗುವುದಕ್ಕೆ ಕಾರಣವಾಗಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂಸುಧಾರಣೆ, ಎಪಿಎಂಸಿ ಹಾಗೂ ಕಾರ್ಮಿಕ ಕಾನೂನುಗಳು ರೈತರು ಮತ್ತು ಕಾರ್ಮಿಕರಿಗೆ ಪೂರಕವಾಗಿರದೆ ಮಾರಕವಾಗಿವೆ. ಇವು ಬರುವ ದಿನಗಳಲ್ಲಿ ಮರಣ ಶಾಸನಗಳಾಗಿ ಪರಿಣಮಿಸಲಿವೆ ಎಂದು ದೂರಿದರು.
ಕಾಂಗ್ರೆಸ್ ಊಳುವವನೆ ಒಡೆಯ ಎಂಬ ಕಾನೂನನ್ನು ಜಾರಿಗೆ ತಂದಿದ್ದರೆ, ಇಂದಿನ ಸರಕಾರ ಹಣ ಉಳ್ಳವನೆ ಭೂಮಿಯ ಒಡೆಯ ಎನ್ನುವ ಕಾನೂನನ್ನು ಜಾರಿಗೆ ತರುತ್ತಿದೆ. ಈ ಕಾನೂನುಗಳ ದೊಡ್ಡ ದೊಡ್ಡ ಬಂಡವಾಳ ಶಾಹಿಗಳಿಗೆ ಪ್ರಯೋಜನೆವೇ ಹೊರತು ಬಡ, ಮಧ್ಯಮ ವರ್ಗದ ಜನರು ಸೇರಿದಂತೆ ಕಾರ್ಮಿಕ ವರ್ಗಕ್ಕೆ ಮಾರಕವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ದೇಶಧ ಜಿಡಿಪಿ ಬಹಳ ಕುಸಿತವನ್ನು ಕಾಣುವ ಮೂಲಕ ದೇಶ ೨೦-೩೦ ವರ್ಷಗಳ ಹಿಂದಕ್ಕೆ ತಳ್ಳಲ್ಪಟ್ಟಿದೆ. ಆರ್.ಆರ್.ನಗರ, ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಭವಿಷ್ಯನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣೀ, ಬಸವರಾಜ ಶಿವಣ್ಣಣವರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಜಿ.ಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ, ಕೊಟ್ರೇಶಪ್ಪ ಬಸೇಗಣ್ಣಿ, ಡಾ. ಸಂಜಯ ಡಾಂಗೆ, ನಗರಸಭಾಧ್ಯಕ್ಷ ಸಂಜೀವಕುಮಾರ ನೀರಲಗಿ, ಉಪಾಧ್ಯಕ್ಷೆ ಶಾಹೀದಾಬಾನು ಜಮಾದಾರ, ಈರಪ್ಪ ಲಮಾಣಿ ಹಾಗೂ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss