Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಸೂಚನೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಹಂತದಲ್ಲಿಯೂ ಹೆಚ್ಚಿನ ಜಾಗೃತಿ ಮೂಡಿಸುವ ಜೊತೆಗೆ ಪರೀಕ್ಷೆ ಪ್ರಮಾಣವನ್ನು ಸಹ ಹೆಚ್ಚಿಸಿ ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕ್ರಮಕೈಗೊಳ್ಳಬೇಕು ಎಂದು ಸರ್ವಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಸೂಚನೆ ನೀಡಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೋಂಕು ಹರಡುವಿಕೆ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರಿಗೆ ಸೂಚನೆ ನೀಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಮಾತನಾಡಿ, ಜಿಲ್ಲೆಯಲ್ಲಿ ೧೭ ಸಾವಿರಕ್ಕೂ ಹೆಚ್ಚು ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಅದರಲ್ಲಿ ೧೨,೭೮೬ ಹೆಕ್ಟೇರ್ ಈರುಳ್ಳಿ ಬೆಳೆ ನಷ್ಟವಾಗಿದೆ. ಇದರ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳು ನಷ್ಟವಾಗಿವೆ. ಸರ್ಕಾರದ ಮಾನದಂಡದ ಪ್ರಕಾರ ರೂ.೧೭.೨೧ ಕೋಟಿ ಪರಿಹಾರ ಬರಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಬೆಳೆ ಹಾನಿಗೆ ಸಂಬಂಧಿಸಿದಂತೆ ನಷ್ಟದ ವಿವರವನ್ನು ಆದಷ್ಟು ಬೇಗ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.
ಅತಿವೃಷ್ಠಿಯಿಂದಾಗಿ ಕೃಷಿ ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆ ಹಾನಿಯ ಕುರಿತು ಹಾಗೂ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಅಧಿಕ ಮಳೆಯಾಗಿರುವುದರಿಂದ ಶೇಂಗಾ ಬೆಳೆಯ ಇಳುವರಿಯಲ್ಲಿ ಸಾಕಷ್ಟು ಕುಂಠಿತವಾಗಿದೆ. ಸಂಭವಿಸಿದ ನಷ್ಟದ ಕುರಿತು ಪರಿಹಾರ ತಂತ್ರಾಂಶದಲ್ಲಿ ಅಳವಡಿಸಿ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ತಿಳಿಸಿದರು.
7123.08 ಲಕ್ಷ ವಿಮಾ ಪರಿಹಾರ : 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 76538 ಜನ ರೈತರು ಫಸಲ್ ಭೀಮಾ ಯೋಜನೆಯಡಿ ನೋಂದಣಿ ಮಾಡಿರುತ್ತಾರೆ. ಚಳ್ಳಕೆರೆ ತಾಲೂಕಿನ 39 ಗ್ರಾ.ಪಂ.ಗಳಿಗೆ, ಹಿರಿಯೂರಿನ 33 ಗ್ರಾ.ಪಂ.ಗಳು, ಚಿತ್ರದುರ್ಗದ 28 ಗ್ರಾ.ಪಂ.ಗಳು, ಮೊಳಕಾಲ್ಮುರುವಿನ 11 ಗ್ರಾ.ಪಂ.ಗಳು, ಹೊಸದುರ್ಗ ತಾಲ್ಲೂಕಿನ 04 ಹೋಬಳಿಗಳು ಸೇರಿದಂತೆ ಒಟ್ಟು ೫೦೫೭೭ ಫಲಾನುಭವಿಗಳಿಗೆ 7123.08 ಲಕ್ಷ ರೂ.ಗಳ ವಿಮಾ ಪರಿಹಾರ ಪಾವತಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸದಾಶಿವ ತಿಳಿಸಿದರು.
ಇಳುವರಿ ಆಧಾರದ ಮೇಲೆ ೪೫೯ ಫಲಾನುಭವಿಗಳಿಗೆ ರೂ.೬೧.೧೨ ಲಕ್ಷ ವಿಮಾ ಪರಿಹಾರ ನೀಡಲಾಗಿದೆ. ೨೦೧೯-೨೦ನೇ ಸಾಲಿನ ಹಿಂಗಾರು ಹಂಗಾಮಿಗೆ ೧೬೩೮೫ ರೈತರು ಬೆಳೆವಿಮೆಗೆ ನೋಂದಣಿ ಮಾಡಿದ್ದು, ವಿಮಾ ಪರಿಹಾರ ಘೋಷಣೆಯಾಗಬೇಕಿದೆ. ೨೦೧೯-೨೦ನೇ ಸಾಲಿನ ಬೇಸಿಗೆ ಹಂಗಾಮಿಗೆ ೩೯ ರೈತರು ಬೆಳೆವಿಮೆಗೆ ನೋಂದಣಿ ಮಾಡಿದ್ದು, ವಿಮಾ ಪರಿಹಾರ ಘೋಷಣೆಯಾಗಬೇಕಿದೆ. ಪ್ರಸಕ್ತ ೨೦೨೦-೨೧ನೇ ಸಾಲಿನ ಮುಂಗಾರು ಹಂಗಾಮಿಗೆ ೮೫೯೧೨ ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
182 ಮಕ್ಕಳು ಮುಖ್ಯವಾಹಿನಿಗೆ : ೨೦೨೦-೨೧ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ೨೪೪ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ವಿವಿಧ ಕಾರ್ಯಕ್ರಮಗಳ ಮೂಲಕ ನೇರ ದಾಖಲಾತಿ ೨೧ ಮಕ್ಕಳು ಹಾಗೂ ಸ್ವಯಂ ಸೇವಕ ರಹಿತ ಕಾರ್ಯತಂತ್ರದಡಿ ೧೬೧ ಮಕ್ಕಳು ಒಟ್ಟು ೧೮೨ ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. ಬಾಕಿ ಉಳಿದ ೬೨ ಮಕ್ಕಳನ್ನು ತ್ವರಿತವಾಗಿ ಮುಖ್ಯವಾಹಿನಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಹೇಳಿದರು.
ಧೂಳು ನಿಯಂತ್ರಿಸಲು ತುರ್ತಾಗಿ ಕಾಮಗಾರಿ ಮುಗಿಸಿ : ನಗರೋತ್ಥಾನ ಹಾಗೂ ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಯೋಜನೆಯಡಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸುಮಾರು ವರ್ಷಗಳಿಂದ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುವುದರ ಜೊತೆಗೆ ಜನರಿಗೆ ಧೂಳಿನ ಸಮಸ್ಯೆ ಉಂಟಾಗುತ್ತಿದೆ ಹಾಗಾಗಿ ಇನ್ನೂ ಮೂರು ತಿಂಗಳೊಳಗೆ ರಸ್ತೆ ಕಾಮಗಾರಿಯನ್ನು ತುರ್ತಾಗಿ ಮುಗಿಸಬೇಕು ಎಂದು ಲೋಕೋಪಯೋಗಿ ಇಂಜಿನಿಯರ್‌ಗೆ ತಾಕೀತು ಮಾಡಿದರು.
ಅಗಸರಿಗೆ, ಕ್ಷೌರಿಕರಿಗೆ 2.26 ಕೋಟಿ ರೂ. ಪರಿಹಾರ : ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಅಗಸ ಹಾಗೂ ಕ್ಷೌರಿಕ ವೃತಿಯ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ತಲಾ ೫೦೦೦ ರೂ.ನಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯ ೩೦೬೪ ಅಗಸ ವೃತ್ತಿಯ ಕಾರ್ಮಿಕರಿಗೆ ಹಾಗೂ ೧೪೫೪ ಕ್ಷೌರಿಕ ವೃತ್ತಿಯ ಕಾರ್ಮಿಕರು ಸೇರಿದಂತೆ ಒಟ್ಟು ೪೫೧೮ ಕಾರ್ಮಿಕರಿಗೆ ತಲಾ ೫೦೦೦ ರೂ.ನಂತೆ ಒಟ್ಟು ರೂ.೨.೨೬ ಕೋಟಿ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾ ಕಾರ್ಮಿಕರ ಅಧಿಕಾರಿ ವಿನುತಾ ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಜಿ.ಪಂ. ಸಿಇಒ ಟಿ.ಯೋಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!