ಉಡುಪಿ: ಕೋವಿಡ್ ಫ್ರಂಟ್ಲೈನ್ ವಾರಿಯರ್ಗಳ ತಂಡದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಹೆಸರು ನೋಂದಾಯಿಸಿದವರಿಗೆ ಉಡುಪಿ ಜಿಲ್ಲಾಸ್ಪತ್ರೆಯ ತಜ್ಞರಿಂದ ಸೋಮವಾರದಿಂದ ತರಬೇತಿ ಆರಂಭಿಸಲಾಗಿದೆ.
ಕೊರೋನಾ ವೈರಸ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯವಾಗುವಂತೆ ಆರೋಗ್ಯ ಇಲಾಖೆಯ ಜೊತೆಗೆ ಕೈಜೋಡಿಸಲು ಕೋವಿಡ್ ಫ್ರಂಟ್ ಲೈನ್ ವಾರಿಯರ್ ಸ್ವಯಂ ಸೇವಕರ ತಂಡ ರಚಿಸುವುದಕ್ಕೆ ಶಾಸಕ ಕೆ. ರಘುಪತಿ ಭಟ್ ಉಡುಪಿಯ ಜನತೆಯಲ್ಲಿ ಮನವಿ ಮಾಡಿದ್ದರು. ಅದರಂತೆ ಹೆಸರು ನೋಂದಾಯಿಸಿಕೊಂಡವರಿಗೆ ಉಡುಪಿಯ ಅಜ್ಜರಕಾಡಿನಲ್ಲಿರುವ ಆಯುಷ್ಮಾನ್ ಇಲಾಖೆಯ ಬಳಿ ಸೋಮವಾರದಿಂದ ತರಬೇತಿ ಆಯೋಜಿಸಲಾಗಿದೆ. ಶಾಸಕ ಕೆ. ರಘುಪತಿ ಭಟ್ ಅವರು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಸ್ವಯಂ ಸೇವಕರಿಗೆ ಕೆಲಸ ನಿರ್ವಹಿಸುವಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರಾದ ಡಾ. ಪ್ರೇಮಾನಂದ, ಡಾ. ರಮೇಶ್, ಡಾ. ದಿವ್ಯಾ ಮತ್ತು ಉಡುಪಿಯ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಉಡುಪಿಯ ವೃತ್ತ ನಿರೀಕ್ಷಕ ಮಂಜುನಾಥ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.