Monday, July 4, 2022

Latest Posts

ಕೋವಿಡ್ ಸಂಕಷ್ಟದಿಂದಾಗಿ ಉತ್ಪಾದಕರಿಗೆ ನೀಡುವ ಹಾಲಿನ ದರ ಕಡಿತ

ಮಂಡ್ಯ: ಕೋವಿಡ್-19 ಇರುವ ಕಾರಣ ಮನ್‍ಮುಲ್‍ನಲ್ಲಿ ಹಾಲು ಮತ್ತು ಪೌಡರ್‍ಗಳು ಸೇರಿದಂತೆ ಇತರೆ ಉತ್ಪನ್ನಗಳ ವ್ಯಾಪಾರ ನಡೆಯುತ್ತಿರುವುದು ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಹಾಲಿನ ಖರೀದಿ ದರವನ್ನು ಕಡಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಮನ್‍ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರು ತಿಳಿಸಿದರು.

ತಾಲೂಕಿನ ದುದ್ದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಕಟ್ಟಿರುವ ಸಂಘದ ಕಟ್ಟಡ ಮತ್ತು ಬಿಎಂಸಿ ಕೇಂದ್ರ ಉದ್ಘಾಟನೆ ಹಾಗೂ ಶಿವಳ್ಳಿ ಗ್ರಾಮದ ಹಾಲು ಉತ್ಪಾದಕ ಸಂಘದಲ್ಲಿ ನೂತನವಾಗಿ ನಿರ್ಮಿಸಿರುವ ಬಿಎಂಸಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಎಂಸಿ ಕಟ್ಟಡವನ್ನು ಡೈರಿಯಲ್ಲಿ ನಿರ್ಮಿಸಲಾಗಿದೆ. ಶುಚಿತ್ವದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಗುಣಮಟ್ಟದ ಹಾಲನ್ನು ಡೈರಿಗೆ ಉತ್ಪಾದಕರು ಸರಬರಾಜು ಮಾಡಬೇಕು ಎಂದು ಹೇಳಿದರು.

ಗುಣಮಟ್ಟದ ಹಾಲು ಹಾಕಿದಲ್ಲಿ ಡೈರಿಯೂ ಬೆಳೆಯುತ್ತದೆ. ಒಕ್ಕೂಟವೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬ ಉತ್ಪಾದಕರು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ ಎಂದರು.

ಹಾಲಿನ ದರ ಕಡಿಮೆಯಾಗಿದೆ ಎಂದು ಉತ್ಪಾದಕರು ಹಸುಗಳನ್ನು ಮಾರಾಟ ಮಾಡಬೇಡಿ, ಮುಂದಿನ ದಿನಗಳಲ್ಲಿ ಶುಭ ಸಮಾರಂಭಗಳು ನಡೆಯುತ್ತವೆ. ಅಂತಹ ಸಂದರ್ಭದಲ್ಲಿ ಹಾಲಿನ ದರವನ್ನು ಹೆಚ್ಚಿಸಿ ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಿ, ಉತ್ಪಾದಕರ ಹಿತ ಕಾಯುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss