ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಉಮೇಶ್ ಕತ್ತಿ ಉದ್ಧಟತನದ ಹೇಳಿಕೆ: ಕಾಂಗ್ರೆಸ್ ಆಕ್ರೋಶ

ಹೊಸದಿಗಂತ ವರದಿ, ಕೊಡಗು:

ಅಕ್ಕಿ ನೀಡಿ ಎಂದು ಕೋರಿಕೆ ಇಟ್ಟ ವ್ಯಕ್ತಿಗೆ ಆಹಾರ ಸಚಿವ ಉಮೇಶ್ ಕತ್ತಿ ಅವರು ನೀಡಿರುವ ಉದ್ಧಟತನದ ಉತ್ತರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸುವುದಾಗಿ ಪಕ್ಷದ ಜಿಲ್ಲಾ ವಕ್ತಾರ ಟಿ.ಈ. ಸುರೇಶ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಕೋವಿಡ್ ಸೋಂಕು ವ್ಯಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಬಡವರು, ಕಾರ್ಮಿಕರು, ಜನಸಾಮಾನ್ಯರು ಆರ್ಥಿಕ ಹಿನ್ನಡೆಯಿಂದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರವೇ ಉಚಿತವಾಗಿ ಪಡಿತರ ಸಾಮಾಗ್ರಿಗಳನ್ನು ವಿತರಿಸಬೇಕಿತ್ತು. ಆದರೆ ಅಕ್ಕಿ ಕೊಡಿ ಎಂದು ಕೇಳಿದ ವ್ಯಕ್ತಿಯ ವಿರುದ್ಧವೇ ಮಾನವೀಯತೆ ಮರೆತು ಆಹಾರ ಸಚಿವರು ಸಹನೆ ಮೀರಿ ಮಾತನಾಡಿದ್ದಾರೆ. ಈ ಬೆಳವಣಿಗೆಯನ್ನು ರಾಜ್ಯದ ಜನತೆ ಸಹಿಸುವುದಿಲ್ಲವೆಂದು ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ಹರಡುವುದನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಕೋವಿಡ್ 2ನೇ ಅಲೆ ಹರಡುವಿಕೆಯ ಬಗ್ಗೆ ತಜ್ಞರ ಸಲಹೆ ಇದ್ದರೂ ಸರ್ಕಾರ ಚುನಾವಣೆಯಲ್ಲಿ ಮುಳುಗಿ ಹೋಗಿದ್ದರಿಂದ ರಾಜ್ಯ ಇಂದು ಸಂಕಷ್ಟಕ್ಕೆ ಸಿಲುಕಿದೆ ಎಂದು ಸುರೇಶ್ ಟೀಕಿಸಿದ್ದಾರೆ.

ಕೋವಿಡ್ ಸಂದಿಗ್ಧ ಪರಿಸ್ಥಿತಿ ನಿವಾರಣೆಯಾಗುವಲ್ಲಿಯವರೆಗೆ ಬಡವರು, ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಬಿಪಿಎಲ್ ಪಡಿತರ ಚೀಟಿದಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss