ಮಂಗಳೂರು: ಇಂದು ರಾಜ್ಯದ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಆರಂಭವಾಗಿದೆ. ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸಿ ಮತ ಚಲಾಯಿಸುವಂತೆ ಸಿಎಂ ಬಿ. ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಸಿಎಂ ಈ ಬಗ್ಗೆ ಟ್ವೀಟ್ ಮಾಡಿದ್ದು, ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಅವರು ಮನವಿ ಮಾಡಿದ್ದಾರೆ.
ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) November 3, 2020