ಧಾರವಾಡ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಕಿಮ್ಸ್ ವೈದ್ಯರು, ಶುಶ್ರೂಷಕರು ಮತ್ತು ಸಿಬ್ಬಂದಿಗಳು ಅತ್ಯತ್ತಮ ಕೆಲಸ ಮಾಡುತ್ತಿದ್ದು, ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಭಿನಂದಿಸಿ, ಶ್ಲಾöಘಿಸಿದರು.
ಸೋಂಕಿತರಿಗೆ ಸಕಾಲಕ್ಕೆ ಉತ್ತಮ ಆರೈಕೆ ಔಷಧಿ, ಚಿಕಿತ್ಸೆಯನ್ನು ವೈದ್ಯರು ಮತ್ತು ಸಿಬ್ಬಂದಿ ನಿರಂತರ ನೀಡುತ್ತಿದ್ದಾರೆ. ದಿನದಿಂದ ದಿನಕ್ಕೆ ಕೊರೋನಾದಿಂದ ಗುಣಮುಖ ಸಂಖ್ಯೆ ಹೆಚ್ಚುತ್ತಿದೆ. ಚಿಕಿತ್ಸೆ ಪಡೆದ ವ್ಯಕ್ತಿಗಳು, ಸಾರ್ವಜನಿಕರಿಂದ ಕಿಮ್ಸ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.
ಕಿಮ್ಸ್ ಸರ್ಕಾರಿ ಆಸ್ಪತ್ರೆ ಯಾಗಿದ್ದು ಜನಮುಖಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ, ಇದು ಖಾಸಗಿ ಆಸ್ಪತ್ರೆಗಳಿಗೂ ಮಾದರಿಯಾಗಿದೆ. ಕಿಮ್ಸ್ ಉನ್ನತೀಕರಣಕ್ಕೆ ಇನ್ನಷ್ಟು ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳವುದಾಗಿ ಸಚಿವರು ತಿಳಿಸಿದರು.