Wednesday, August 17, 2022

Latest Posts

ಕೋವಿಡ್-19 ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ-ವಿಶೇಷ ಅಧಿವೇಶನ ಕರೆಯಲು ಕೆ.ಟಿ. ಶ್ರೀಕಂಠೇಗೌಡ ಒತ್ತಾಯ

ಮದ್ದೂರು : ಕೊರೋನಾ ಚಿಕಿತ್ಸೆಗಾಗಿ ಖರೀದಿಸಿರುವ ವೈದ್ಯಕೀಯ ಉಪಕರಣಗಳಲ್ಲಿ ನಡೆದಿರುವ ಅವ್ಯವಹಾರ ಚರ್ಚೆಗೆ ಮುಖ್ಯಮಂತ್ರಿಗಳು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಒತ್ತಾಯಿಸಿದರು.
ತಾಲೂಕಿನ ಕೊಪ್ಪ ಗ್ರಾಮದ ಇಂದಿರಾನಗರ ಬಡಾವಣೆಯ ಗರೀಬಿ ಕಾಲೋನಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್ ಹೆಸರಿನಲ್ಲಿ ಔಷಧಿ, ಹಾಸಿಗೆ, ಪಿಪಿಇ ಕಿಟ್ ಮತ್ತಿತರ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಸುಮಾರು 2 ಸಾವಿರ ಕೋಟಿ ಅವ್ಯವಹಾರ ನಡೆಸಿದೆ ಎಂದು ಗುಮಾನಿ ಇದೆ. ಈ ಬಗ್ಗೆ ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಕೋವಿಡ್ ಪರೀಕ್ಷೆಗಳ ವರದಿಯಲ್ಲಿ ಪ್ರಯೋಗಾಲಯದಿಂದ ವ್ಯತ್ಯಾಸಗಳ ವರದಿ ಬರುತ್ತಿದೆ. 1 ಸಾವಿರ ಮಂದಿಗೆ ಪರೀಕ್ಷೆ ನಡೆಸಿದರೆ ಕನಿಷ್ಠ 500 ಮಂದಿ ಕೊರೋನಾ ಪಾಸಿಟೀವ್ ವರದಿಗಳು ಬರುತ್ತಿವೆ. ಹೀಗಾಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.
ಅಯೋದ್ಯೆ ರಾಮಮಂದಿರ ನಿರ್ಮಾಣಕ್ಕೆ ಹೆಚ್ಚಿನ ಮಹತ್ವ ಅಗತ್ಯವಿಲ್ಲ. ಶ್ರೀರಾಮನನ್ನು ಇಡೀ ದೇಶ ಪೂಜಿಸುತ್ತದೆ. ಮಂದಿರ ಸಮಸ್ಯೆ ಇತ್ಯರ್ಥ ಮಾಡಲು ಕೇಂದ್ರ ಸರ್ಕಾರಕ್ಕೆ ಇಷ್ಟು ವರ್ಷಗಳ ಕಾಲ ಅಗತ್ಯವಿರಲಿಲ್ಲ. ರಾಜಕೀಯ ಪಕ್ಷಗಳು ರಾಮಮಂದಿರ ನಿರ್ಮಾಣವನ್ನು ರಾಜಕೀಯಕ್ಕೆ ಬಳಸಿಕೊಂಡಿವೆ. ರಾಜಕಾರಣವನ್ನು ಬದಿಗಿಸಿರುವ ಮೂಲಕ ಎಲ್ಲಾ ಸಮಾಜ ಧರ್ಮದ ಜನ ರಾಮಮಂದಿರ ನಿರ್ಮಾಣ ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಮ್ಮ ಸಹಮತವೂ ಇದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!