Wednesday, August 17, 2022

Latest Posts

ಕೋವಿಡ್-19 ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಕೆಲಸವನ್ನು ಕಾರ್ಯಕರ್ತರು ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಮನಗರ: ರಾಜ್ಯದಲ್ಲಿ ಕೋವಿಡ್ ನಿಂತಿಲ್ಲದ ಸಮಯದಲ್ಲೂ ಕಾರ್ಯಕರ್ತರು ಜನರಿಗೆ ಜಾಗೃತಿ ಮೂಡಿಸಿ ಸಹಾಯಕ್ಕೆ ನಿಲ್ಲುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕೆಂದು ಬಿಜೆಪಿ ರಾಜಾಧ್ಯಕ್ಷ ನಳಿನ್ ‌ಕುಮಾರ್ ಕಟೀಲ್ ಕರೆ ನೀಡಿದರು.
ನಗರದ ಹೊರವಲಯದಲ್ಲಿ ಗುರುವಾರ ಆಯೋಜಿಸಿದ್ದ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಕೋವಿಡ್-೧೯ ನಿಯಂತ್ರಣ ಮಾಡಲು ರಾಜ್ಯಾಧ್ಯಂತ ಪ್ರವಾಸ ಮಾಡಿ ಜಿಲ್ಲಾ ಪದಾಧಿಕಾರಿಗಳಿಂದ ಮಾಹಿತಿ ಕಲೆಹಾಕುತ್ತಿದ್ದೇನೆ. ರಾಷ್ಟ್ರದಲ್ಲಿ ಕೋವಿಡ್ ಬಂದ ಕಾರಣ ಲಾಕ್‌ಡೌನ್ ಆದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷರು ಕಾರ್ಯಕರ್ತರಿಗೆ ಕರೆ ನೀಡಿ, ನಮ್ಮ ಕೆಲಸ ಕೇವಲ ರಾಜಕಾರಣ ಮಾಡುವುದಷ್ಟೆ ಅಲ್ಲ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವಾಹಿ ಸಂಘಟನೆ ಆಧಾರದ ಮೇಲೆ ಸೇವೆ ಒದಗಿಸಬೇಕೆಂದು ಸೂಚನೆ ನೀಡಿದ್ದಾರೆ ಎಂದರು.
ಕೊರೋನಾ ಸಂಕಷ್ಟ ಸಮಯದಲ್ಲಿ ರಾಜ್ಯದಲ್ಲಿ ೬೦ ಲಕ್ಷ ಕುಟುಂಬಗಳ ೧.೫ ಕೋಟಿ ಜನರಿಗೆ ಆಹಾರ ತಲುಪಿಸಲಾಗಿದೆ. ೧.೫ ಲಕ್ಷ ಜನರಿಗೆ ಔಷಧ, ೧೫ ಸಾವಿರ ಜನರಿಗೆ ಆಸ್ಪತ್ರೆ ಖರ್ಚು ವೆಚ್ಚವನ್ನು ಭರಿಸುವ ಕೆಲಸವನ್ನು ಪಕ್ಷದ ವತಿಯಿಂದ ಮಾಡಲಾಗಿದೆ ಎಂದು ಹೇಳಿದರು.
ಯಡಿಯೂರಪ್ಪ ಸರ್ಕಾರವನ್ನು ಬೀಳಿಸಲು ಸಿ.ಪಿ.ಯೋಗೇಶ್ವರ್ ನನ್ನನ್ನು ಬೇಟಿ ಮಾಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನ ೧೫ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ತಿರುಗೇಟು ನೀಡಿದರು.
ಜಿಲ್ಲಾ ಪದಾಧಿಕಾರಿಗಳು ಮತ್ತು ಮಂಡಲ ಅದ್ಯಕ್ಷರುಗಳನ್ನು ನೇಮಕ ಮಾಡುವ ಸಮಯದಲ್ಲಿ ಕೋರ್ ಕಮಿಟಿಯಲ್ಲಿ ಇಲ್ಲದಿರುವವರನ್ನು ಮತ್ತು ಹಿರಿಯ ಮುಖಂಡರ ಸಲಹೆ ಪಡೆಯದೆ ಜಿಲ್ಲಾಧ್ಯಕ್ಷರು ಏಕ ಪಕ್ಷೀಯವಾಗಿ ನೇಮಕ ಮಾಡಿದ್ದಾರೆ. ಇದನ್ನು ಕೂಡಲೆ ಸರಿಪಡಿಸಿ ನಿಷ್ಠಾವಂತ ಕಾರ್ಯಕರ್ತರಿಗೆ ಸಂಘಟನೆಯ ಜವಬ್ದಾರಿ ವಹಿಸಬೇಕೆಂಬ ಮನವಿ ಪತ್ರವನ್ನು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ರಾಜ್ಯಾಧ್ಯಕ್ಷರು ೪ ದಿನಗಳಲ್ಲಿ ಬಗೆಹರಿಸುವ ಭರವಸೆ ನೀಡಿದರು.
ಈ ವೇಳೆ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ರಾಜ್ಯವಕ್ತಾರ ಅಶ್ವಥ್‌ನಾರಾಯಣಗೌಡ, ವಿಧಾನ ಪರಿಷತ್ತು ಸದಸ್ಯ ಆ.ದೇವೇಗೌಡ ರಾಮನಗರ ಜಿಲ್ಲಾ ಸಂಘಟನಾ ಉಸ್ತುವಾರಿ ಗೀತಾವಿವೇಕಾನಂದ, ಮುಖಂಡ ಮುನಿರಾಜುಗೌಡ, ಜಿಲ್ಲಾಧ್ಯಕ್ಷ ದೇವರಾಜು, ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಅಧ್ಯಕ್ಷ ವರದರಾಜಗೌಡ, ಪ್ರಾಧಿಕಾರದ ಅಧ್ಯಕ್ಷ ಮುರುಳೀಧರ್, ತಾಲ್ಲೂಕು ಮಾಜಿ ಅಧ್ಯಕ್ಷ ಪ್ರವೀಣ್‌ಗೌಡ, ಮಾಜಿ ಅಧ್ಯಕ್ಷ ಎಸ್.ಆರ್.ನಾಗರಾಜು, ನಗರಸಭೆ ಮಾಜಿ ಸದಸ್ಯ ನಾಗೇಶ್, ಕನಕಪುರ ನಗರ ಅಧ್ಯಕ್ಷರು ನಾಗಾನಂಧ್ ಮಾಜಿ ಜಿಲ್ಲಾ ವಕ್ತಾರ ಪಧ್ಮನಾಭ್, ಕನಕಪುರ ಗ್ರಾಮೀಣ ಮಂಡಲದ ಮಾಜಿ ಅಧ್ಯಕ್ಷರು ಭೂಹಳ್ಳಿಶ್ರೀನಿವಾಸ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!