ಕೊಡಗು: ಕೊಡಗು ಜಿಲ್ಲೆಯಲ್ಲಿ ಹತ್ತು ಮಂದಿ ಪೊಲೀಸ್ ಸಿಬ್ಬಂದಿ ಸಹಿತ ಬುಧವಾರ ಬೆಳಗ್ಗೆ 31 ಮತ್ತು ಮಧ್ಯಾಹ್ನ 15 ಸೇರಿದಂತೆ ಒಟ್ಟು 46 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 2394ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1951 ಮಂದಿ ಗುಣಮುಖರಾಗಿದ್ದಾರೆ. 412 ಸಕ್ರಿಯ ಪ್ರಕರಣಗಳಿದ್ದು, 31 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 356 ಆಗಿದೆ ಎಂದು ಅವರು ಹೇಳಿದ್ದಾರೆ.