spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್-19 ನಡುವೆಯೂ ಸಂಭ್ರಮದ ವರಮಹಾಲಕ್ಷ್ಮಿ ವ್ರತಾಚರಣೆ

- Advertisement -Nitte

ಮಂಡ್ಯ : ಮಹಾಮಾರಿ ಕೋವಿಡ್-19 ಹಿನ್ನಲೆಯಲ್ಲಿ ದೇಶಾದ್ಯಂತ ಕೆಲವು ವಲಯಗಳಿಗೆ ಇನ್ನೂ ಲಾಕ್‍ಡೌನ್ ಇದ್ದರೂ ನಾಡಿನ ಜನತೆ ಶ್ರೀ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮ ಸಡಗರದಿಂದಲೇ ಆಚರಿಸಿದರು.
ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ ನಡೆಯಲಿದ್ದು, ಹಬ್ಬಕ್ಕಾಗಿ ನಿನ್ನೆಯಿಂದಲೇ ಜನತೆ ಸಿದ್ಧತೆಯಲ್ಲಿ ತೊಡಗಿದ್ದು. ಇಂದು ಸಂಪ್ರದಾಯದಂತೆ ಮನೆಗಳಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ವಿವಿಧ ಭಕ್ಷ್ಯ ಭೋಜನಗಳನ್ನು ಇಟ್ಟು ಪೂಜೆ ಸಲ್ಲಿಸಿದ್ದು, ವಿಶೇಷವಾಗಿತ್ತು. ಜಿಲ್ಲಾದ್ಯಂತ ಎಲ್ಲ ಶಕ್ತಿ ದೇವಾಲಯಗಳಲ್ಲೂ ವಿಶೇಷ ಪೂಜಾ ಕಾರ್ಯಗಳು ನಡೆದವು. ಆದರೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನಿಷೇದಿಸಲಾಗಿತ್ತು.
ನಗರದ ಪೇಟೆ ಬೀದಿಯ ಶ್ರೀ ಶ್ರೀನಿವಾಸ ದೇವಸ್ತಾನ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮಿ ಹಾಗೂ ಶ್ರೀಚಕ್ರ ಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಸಾಂಗೋಪಸಾಂಗವಾಗಿ ನಡೆದವು. ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ, ಬೆಳ್ಳಿ ಅಲಂಕಾರ, ತೋಮಾಲೆ ಸೇವೆ, ಮಧ್ಯಾಹ್ನ ಮಹಾ ಮಂಗಳಾರತಿ ನಡೆಯಿತು. ದೇವರ ದರ್ಶನಕ್ಕೆ ಭಕ್ತರ ಅವಕಾಶವಿಲ್ಲದ ಕಾರಣ ಅಲ್ಲೊಬ್ಬ ಇಲ್ಲೊಬ್ಬ ಭಕ್ತರು ಬಂದು ಬಾಗಿಲ ಮರೆಯಲ್ಲಿ ದೇವರ ದರ್ಶನ ಪಡೆಯುತ್ತಿದ್ದುದು ಕಂಡುಬಂತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss