Friday, August 12, 2022

Latest Posts

ಕೋವಿಡ್-19 ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಮಾಜಿ ಸಂಸದ ಧ್ರುವನಾರಾಯಣ್

ರಾಮನಗರ : ‘ಕೋವಿಡ್-೧೯ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಮಾಜಿ ಸಂಸದ ಧ್ರುವನಾರಾಯಣ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ‘ ಆರಂಭದಲ್ಲಿ ಕೊರೊನಾ ಸೋಂಕಿತ ಪೀಡಿತದಲ್ಲಿ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿ ಇತ್ತು. ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಸಾವಿನ ಕೊಂಡಿಯನ್ನು ಕತ್ತರಿಸಲು ರಾಜ್ಯ ಸರ್ಕಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ವೆಂಟಿಲೇಟರ್, ಬೆಡ್‌ಗಳ ಕೊರತೆ ಇದೆ.

ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಪರವಾಗಿ ಆರೋಗ್ಯ ಸಚಿವ ಶ್ರೀರಾಮುಲು, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರುಗಳು ದಿನಕ್ಕೊಂದು ಪತ್ರಿಕೆಗಳಲ್ಲಿ ಹೇಳಿಕೆ ಸೀಮಿತರಾಗಿ ಕಾಲಹರಣ ಮಾಡುತ್ತಿದ್ದಾರೆ. ವಿದೇಶದಿಂದ ಬಂದವರನ್ನು ಆರಂಭದಲ್ಲೇ ಕ್ವಾರಂಟೈನ್ ಮಾಡಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಕೋವಿಡ್ ಸಾವು ಆಗುತ್ತಿರಲಿಲ್ಲ. ಈ ಕಾರಣದಿಂದ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಸಿತಕಂಡಿದೆ. ದೇಶದ ಮೊದಲ ಕೋವಿಡ್ ಸಾವು ಗುಲ್ಬರ್ಗಾ ಜಿಲ್ಲೆಯಲ್ಲಿ ಆಯಿತು.

ಮುಂಜಾಗ್ರತಾ ಕ್ರಮಗೊಂಡಿದ್ದರೆ ಇಂದಿನ ದುಃಸ್ಥಿತಿ ಬರುತ್ತಿರಲಿಲ್ಲ. ಇದುವರೆವಿಗೂ ನಾನು ರಾಜ್ಯದ ೨೨ ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಅನುಷ್ಟಾನದ ವರದಿಯನ್ನು ಪಡೆಯಲು ಇಂದು ರಾಮನಗರಕ್ಕೆ ಭೇಟಿ ನೀಡಿದ್ದೇನೆ. ಈ ಆರೋಗ್ಯ ಹಸ್ತ ಕಾರ್ಯಕ್ರಮದ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಆರೋಗ್ಯ ಹಸ್ತ ಕಾರ್ಯಕ್ರಮದ ಅಧ್ಯಕ್ಷರಾದ ಹೆಚ್.ಎ.ಇಕ್ಬಾಲ್ ಹುಸೇನ್ ಮತ್ತು ತಂಡದವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷ ತಂದಿದೆ’. ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss