Thursday, August 18, 2022

Latest Posts

ಕೋವಿಡ್-19 ನಿರ್ವಹಣೆಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ:ಸಿದ್ದರಾಮಯ್ಯ

ಮಂಡ್ಯ : ಕೋವಿಡ್-19 ನಿರ್ವಹಣೆ ಹೆಸರಿನಲ್ಲಿ ರಾಜ್ಯ ಸರ್ಕಾರ ನಾಲ್ಕು ತಿಂಗಳಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಭ್ರಷ್ಠಾಚಾರ ನಡೆಸಿದ್ದು, ಅವ್ಯವಹಾರದ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೊರೋನಾದಲ್ಲೂ ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಸಂಸ್ಕಾರ ಹಗರಣದ ಪುಸ್ತಕ ಬಿಡುಗಡೆ ಮಾಡಿ ಮಾನಾಡಿದ ಅವರು, ಕೋವಿಡ್-19 ಸಾಮಗ್ರಿಗಳ ಖರೀದಿಗೆ 4167 ಕೋಟಿ ರೂ. ಖರ್ಚು ಮಾಡಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಈವರೆಗೆ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಂಬಂಧಿಸಿದ ಸಚಿವರಿಗೆ ಸುಮಾರು 20 ಪತ್ರಗಳನ್ನು ಬರೆದಿದ್ದೇನೆ. ಆದರೆ, ಒಂದು ಪತ್ರಕ್ಕೂ ಉತ್ತರ ಬಂದಿಲ್ಲ. 24 ಗಂಟೆಗಳಲ್ಲೇ ಎಲ್ಲ ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳುತ್ತಾರೆ. ಇನ್ನೂ ಏಕೆ ಉತ್ತರ ನೀಡಿಲ್ಲ. ಇದು ಭ್ರಷ್ಠಾಚಾರವನ್ನು ಮುಚ್ಚಿಡುವ ಪ್ರಯತ್ನವಲ್ಲವೇ ಎಂದು ಪ್ರಶ್ನಿಸಿದರು.

4 ತಿಂಗಳಲ್ಲಿ ಆರೋಗ್ಯ ಇಲಾಖೆಯ 700 ಕೋಟಿ ಖರ್ಚು ಮಾಡಿದೆ. ಸಮಾಜ ಕಲ್ಯಾಣ ಇಲಾಖೆ, ಕಂದಾಯ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಪೆÇಲೀಸ್ ಇಲಾಖೆಗಳಿಂದ ವೈದ್ಯಕೀಯ ಸಲಕರಣೆಗಳನ್ನು 2 ರಿಂದ 3ರಷ್ಟು ದುಪ್ಪಟ್ಟು ಹಣ ನೀಡಿ ಖರೀದಿಸಿದ್ದಾರೆ. ಇದು ಹಣ ಹೊಡೆಯುವ ತಂತ್ರವಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!