ಬೆಂಗಳೂರು: ಕೊರೋನಾ ಬಗ್ಗೆ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಡಿಸಿಎಂ ಅಶ್ವಥ್ ನಾರಾಯಣ ಕೋವಿಡ್-19 ರಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ 19 ಸೋಂಕಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಮೂಡಿದೆ. ಕೊರೊನಾ ಸೋಂಕಿತರಿಗೆ ಅವಮಾನ ಮಾಡುವುದು. ಗೊಂದಲದ ವಾತಾವರಣ ಸೃಷ್ಟಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಅಂತಹವರ ವಿರುದ್ಧ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು , ಸಿಬ್ಬಂದಿ , ಪೊಲೀಸ್ ಇಲಾಖೆ , ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಸ್ಪಂದನೆ ನೀಡಿದ್ದಾರೆ ಎಂದು ಡಿಸಿಎಂ ಹಾಗೂ ಸಚಿವರು ಮೆಚ್ಚುಗೆ ಸೂಚಿಸಿದರು. ವೀಡಿಯೊ ಸಂವಾದಲ್ಲಿ ದ.ಕ.ಜಿಲ್ಲಾಡಳಿತಕ್ಕೆ ಕೊರೊನಾ ನಿಯಂತ್ರಿಸಲು ಸಚಿವರು ಮಾರ್ಗದರ್ಶನ ನೀಡಿದರು.