Wednesday, July 6, 2022

Latest Posts

ಕೋವಿಡ್-19 ಭೀತಿ: ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆ ರದ್ದು

ಹೊಸ ದಿಗಂತ ವರದಿ, ಯಾದಗಿರಿ:

ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿರುವ ನಿಟ್ಟಿನಲ್ಲಿ 2021ನೇ ಸಾಲಿನ ಜನೆವರಿಯಲ್ಲಿ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಲಾಗಿದೆ.
ಈ ಕುರಿತು ಇದೇ ಡಿ.29ರಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದ್ದು, ಅದರಂತೆ ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಅಂತರಾಜ್ಯಗಳಿAದಲ್ಲೂ ಭಕ್ತಾಧಿಗಳು ಆಗಮಿಸುವರು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು 2021ರ ಜನವರಿ 13 ರಿಂದ 18ರ ವರೆಗೆ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಉತ್ಸವವನ್ನು ರದ್ದುಪಡಿಸಲಾಗಿದೆ, ಆದ ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss