ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ವಾರ್ಷಿಕ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್.ವೈ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19’ ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ. ಎಂದು ಬರೆದುಕೊಂಡಿದ್ದಾರೆ.
#ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.@BSYBJP #DonatetoCMRFCovid19 pic.twitter.com/GXuzVTuaua
— CM of Karnataka (@CMofKarnataka) April 1, 2020