Friday, August 12, 2022

Latest Posts

ಕೋವಿಡ್-19 ಹೆಸರಲ್ಲಿ ಸರ್ಕಾರ ಜನರನ್ನು ಕತ್ತಲಲ್ಲಿ ಇಟ್ಟಿದೆ: ಸಂಸದ ಡಿ.ಕೆ ಸುರೇಶ್ ಆರೋಪ

ರಾಮನಗರ: ರಾಜ್ಯ ಸರ್ಕಾರ  ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಟ್ಟು, ಹಣ ಮಾಡುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ಸರ್ಕಾರ ಮಾಧ್ಯಮಗಳ ಮೂಲಕ ಸುಳ್ಳು ಮಾಹಿತಿಯನ್ನು ಹಂಚುವ ಮೂಲಕ ಜನರನ್ನು ಕತ್ತಲಲಿನಲ್ಲಿ ಇಟ್ಟಿದೆ. ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ ೧೭ ಎಂದು ಸರ್ಕಾರ ಹೇಳುತ್ತಿದೆ. ಆದರೆ ಈ ಜಿಲ್ಲೆಯೂಂದರಲ್ಲೇ ಸುಮಾರು ೮೦ ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸರ್ಕಾರ ಸತ್ಯವನ್ನು ಎಲ್ಲೂ ಹೇಳುತ್ತಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿ ದಿನ ೫ ಸಾವಿರದಿಂದ ೬ ಸಾವಿರ ಕೊರೊನಾ ವೈರಸ್ ಗೆ ತುತ್ತಾಗುತ್ತಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ, ಆದರೆ ಸರ್ಕಾರದ ಹೇಳುವ ಸಂಖ್ಯೆಗಿAತ ಮೂರು ಪಟ್ಟು ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈಗಾಗಲೇ ಸಚಿವರು ಜನರನ್ನು ದೇವರೇ ಕಾಪಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಜನರು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಲ್ಲ, ಅಧಿಕಾರ ಮುಖ್ಯ. ಯಾರನ್ನು ಎಂಎಲ್ಸಿ, ಛೇರ್ಮೆನ್ ಮಾಡಬೇಕು, ಮಂತ್ರಿ ಮಂಡಲ ರಚನೆ ಮಾಡಬೇಕು ಹಾಗೂ ಕೊರೊನಾ ಹೆಸರಿನಲ್ಲಿ ಹಣ ಮಾಡೋದು ಅಷ್ಟೆ ಗೊತ್ತಿರೋದು, ಈ ಸರ್ಕಾರ ವರ್ಗಾವಣೆ ಧಂದೆಯಲ್ಲಿ ಮುಳುಗಿದೆ ಎಂದು ಸಂಸದ ಡಿ.ಕೆ ಸುರೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯೋಗೇಶ್ವರ್ ಬಿಜೆಪಿಗೆ ನಂಬಿಕೆಯಿ0ದ ಇದ್ದರೆ ಸಾಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ನಡುವಿನ ವಾಕ್ಸಮರದ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ ಯೋಗೇಶ್ವರ್‌ಗೆ ಎಂಎಲ್‌ಸಿ ಆಗಲು ಅವಕಾಶ ಕೊಟ್ಟವರಿಗೆ ನಂಬಿಕೆಯಿAದ ಇದ್ದರೆ ಸಾಕು ಎನ್ನುವ ಮೂಲಕ ತಿರುಗೇಟು ನೀಡಿದರು.
ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಲ್ಲ, ಅವರಿಗೆ ಅಧಿಕಾರವಷ್ಟೇ ಮುಖ್ಯ. ಯಾರನ್ನು ಎಂಎಲ್‌ಸಿ ಮಾಡಬೇಕು, ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಬೇಕು, ಮಂತ್ರಿ ಮಂಡಲ ರಚನೆ ಮಾಡಬೇಕು ಅನ್ನೋ ಚಿಂತೆ ಅವರಿಗೆ ಜಾಸ್ತಿ. ಜೊತೆಗೆ ಕೊರೋನಾ ಹೆಸರಿನಲ್ಲಿ ಹಣ ಮಾಡಬೇಕು ಅನ್ನೋ ಉದ್ದೇಶವಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು. ಕೋವಿಡ್ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿ ಹೋರಾಟ ಮಾಡಲು ಕಷ್ಟ, ಸದ್ಯದ ಸ್ಥಿತಿಯಲ್ಲಿ ಜನರು ಒಟ್ಟಿಗೆ ಸೇರಲು ಸಾಧ್ಯವಿಲ್ಲ. ಹೀಗಾಗಿ ಮಾಧ್ಯಮಗಳ ಮೂಲಕ ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಹೊಂದಾಣಿಕೆಯೇ ಇಲ್ಲ. ಈ ಮಧ್ಯೆ ವರ್ಗಾವಣೆ ದಂಧೆಯೂ ನಡೆಯುತ್ತಲೇ ಇದೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ ಹಾಗೂ ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ದಾಖಲೆ ಪುಸ್ತಕ ಬಿಡುಗಡೆ ಮಾಡಿದರು.

ಸಲಕರಣೆ ಖರೀದಿ:- ಕೊರಾನಾ ಅವಧಿಯಲ್ಲಿನ ಸಲಕರಣೆಗಳ ಖರೀದಿ ಹಗರಣವನ್ನು ರಾಜ್ಯ ಬಿಜೆಪಿ ಸರ್ಕಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಆಗ್ರಹಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸಲಕರಣಗಳ ಖರೀದಿಗೆ ಒಟ್ಟಾರೆ ₨೨೧೦೮ ಕೋಟಿ ವ್ಯಯಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ ವಾಸ್ತವದಲ್ಲಿ ₨೪೧೬೭ ಕೋಟಿ ಖರ್ಚು ಮಾಡಿರುವುದಕ್ಕೆ ದಾಖಲೆಗಳಿವೆ. ಹೀಗಾಗಿ ಇವುಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ. ಇದನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒಳಪಡಿಸಬೇಕು. ಈ ಬಗ್ಗೆ ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆಯಬೇಕು. ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು’ ಎಂದು ಅವರು ಒತ್ತಾಯಿಸಿದರು.

“ಸದ್ಯ ದಿನವೊಂದರಲ್ಲಿ ವಿಶ್ವದಲ್ಲೇ ಅತಿಹೆಚ್ಚು ಕೋವಿಡ್ ಸೋಂಕಿತರು ಭಾರತದಲ್ಲಿ ಪತ್ತೆ ಆಗುತ್ತಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ದೇಶವು ವಿಶ್ವದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ ೧.೫ ಲಕ್ಷದಷ್ಟಿದ್ದು, ಈ ತಿಂಗಳಾ0ತ್ಯಕ್ಕೆ ಇದು ೩.೫ ಲಕ್ಷಕ್ಕೆ ಏರಿಕೆ ಆಗಬಹುದು. ಆದರೆ ಅಷ್ಟು ರೋಗಿಗಳಿಗೆ ಬೇಕಾಗುವಷ್ಟು ಹಾಸಿಗೆ, ವೆಂಟಿಲೇಟರ್ ನಮ್ಮಲ್ಲಿ ಇಲ್ಲವೇ ಇಲ್ಲ. ಬೆಂಗಳೂರಿನ ವಸ್ತು ಪ್ರದರ್ಶನ ಕೇಂದ್ರದಲ್ಲಿ ೧೦ ಸಾವಿರ ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಕೇವಲ ಪ್ರಚಾರಕ್ಕೆ ಸೀಮಿತ ಆಗಿದೆ. ವಾಸ್ತವದಲ್ಲಿ ಅಲ್ಲಿ ಕೇವಲ ೧೫೦೦ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದು ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಆದರೆ ಸರ್ಕಾರ, ಸಚಿವರು ಮಾತ್ರ ಜನರನ್ನು ಯಾಮಾರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು ದೇಶದಲ್ಲೇ ಮೂರನೇ ಸ್ಥಾನದಲ್ಲಿ ಇದೆ. ರಾಜ್ಯದಿಂದ ಕೇಂದ್ರಕ್ಕೆ ಸರಾಸರಿ ೧-೧.೦೫ ಲಕ್ಷ ಕೋಟಿ ಜಿಎಸ್‌ಟಿ ಹೋಗುತ್ತಿದೆ. ಆದರೆ ಲಾಕ್‌ಡೌನ್‌ನಲ್ಲಿ ಈ ಪ್ರಮಾಣ ೯೬ ಸಾವಿರ ಕೋಟಿಗೆ ಇಳಿದಿದೆ. ಆದಾಗ್ಯೂ ಕೇಂದ್ರವು ರಾಜ್ಯಕ್ಕೆ ಅನುದಾನ ನೀಡಲು ನಿರಾಕರಿಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ “ಬೆಂಗಳೂರಿನಲ್ಲಿ ಈಚೆಗೆ ೨೬ ವರ್ಷದ ಬಾಣಂತಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯದೇ ಮೃತಪಟ್ಟ ಘಟನೆ ಮನ ಕಲಕುವಂತೆ ಇತ್ತು. ರಾಜ್ಯದಲ್ಲಿ ಬಡವರಿಗೆ ಚಿಕಿತ್ಸೆ ಸಿಗದೇ ನರಳುತ್ತಿರುವುದು ದುರದೃಷ್ಟಕರ. ಈ ಅಕ್ರಮಗಳನ್ನು ಪ್ರಶ್ನಿಸಲು ಹೋದವರಿಗೆ ನೋಟಿಸ್ ನೀಡಲಾಗುತ್ತಿದೆ. ಬಿಜೆಪಿ ನಾಯಕರು ತಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ ಎಂಬುದನ್ನು ಮರೆತಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss