ಬೆಂಗಳೂರು: ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ದೃಢವಾಗಿದ್ದು, ಹೋಂ ಐಸೋಲೇಷನ್ ನಲ್ಲಿದ್ದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್ ಕುಮಾರ್ ಅವರು ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ.
ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ.
— S.Suresh Kumar, Minister – Govt of Karnataka (@nimmasuresh) October 11, 2020