Tuesday, June 28, 2022

Latest Posts

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: 12 ಕೊರೋನಾ ಸೋಂಕಿತರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್ ನ ಬರುಚ್​ನಲ್ಲಿರುವ ವೆಲ್ಫೇರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.

ಶನಿವಾರ ನಸುಕಿನ ಜಾವ  1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ 50 ಜನ ರೋಗಿಗಳಿದ್ದು, ಅವರಲ್ಲಿ 24 ಜನ ತೀವ್ರ ನಿಗಾ ಘಟಕದಲ್ಲಿದ್ದರು. ಬದುಕುಳಿದವರೆಲ್ಲರನ್ನೂ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಮತ್ತು ಹೊಗೆಯಿಂದಾಗಿ ಉಸಿರಾಡಲು ಆಗದೇ 12 ಕರೊನಾ ರೋಗಿಗಳು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು  ಬರುಚ್​ ಪೊಲೀಸ್​ ವರಿಷ್ಠಾಧಿಕಾರಿ ರಾಜೇಂದ್ರಸಿನ್ಹ್​ ಚುದಾಸಮಾ ಆತಂಕ ವ್ಯಕ್ತಪಡಿಸಿದ್ದಾರೆ.

4 ಅಂತಸ್ತಿನ ನಿಯೋಜಿತ ಕೋವಿಡ್-19 ಆಸ್ಪತ್ರೆ ಬರುಚ್-ಜಂಬುಸರ್ ಹೆದ್ದಾರಿಯಲ್ಲಿದೆ.  ಅದರ ನೆಲಮಹಡಿಯ ಕೋವಿಡ್ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಶೈಲೇಶ್ ಸನ್ಸಿಯಾ ತಿಳಿಸಿದ್ದಾರೆ.

ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ, ತನಿಖೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss