Saturday, August 13, 2022

Latest Posts

ಕ್ಯಾಮರಾ ಕಣ್ಗಾವಲಿನಲ್ಲಿ ನೀರ್ಚಾಲು ಪೇಟೆ: ಬದಿಯಡ್ಕ ಪೊಲೀಸ್ ಠಾಣೆಗೆ ವ್ಯಾಪಾರಿಗಳಿಂದ ಸಿಸಿ ಕ್ಯಾಮರಾ ಯೂನಿಟ್ ಹಸ್ತಾಂತರ

ಬದಿಯಡ್ಕ: ಸುರಕ್ಷತೆಯ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿಯೇ ನೀರ್ಚಾಲು ಪೇಟೆಯು ಇತರೆಡೆಗಳಿಗೆ ಮಾದರಿಯಾಗಿದೆ. ಜಿಲ್ಲೆಯ ಇತರ ಯಾವುದೇ ಕಡೆ ಇಲ್ಲದ ಅತ್ಯಾಧುನಿಕ ರೀತಿಯ, ಉತ್ಕೃಷ್ಟ ದರ್ಜೆಯ ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ನೀರ್ಚಾಲು ಪೇಟೆಯನ್ನಿರಿಸಲು ಸಹಕರಿಸಿದ ವ್ಯಾಪಾರಿ ಸಂಘಟನೆಗಳು ಪೊಲೀಸರೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ಬದಿಯಡ್ಕ ಪೊಲೀಸ್ ಠಾಣಾಧಿಕಾರಿ ಎ.ಅನೀಶ್ ಹೇಳಿದರು.
ನೀರ್ಚಾಲು ಪೇಟೆಯಲ್ಲಿ ವ್ಯಾಪಾರಿಗಳು, ಸಹಕಾರಿ ಸಂಘ ಸಂಸ್ಥೆಗಳು, ಇನ್ನಿತರ ಸಂಘಟನೆಗಳು, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ನೇತೃತ್ವದಲ್ಲಿ ಅಳವಡಿಸಿದ ಸಿಸಿ ಕ್ಯಾಮರಾ ಉದ್ಘಾಟನೆ ಹಾಗೂ ಬದಿಯಡ್ಕ ಪೊಲೀಸ್ ಠಾಣೆಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನೀರ್ಚಾಲು ಪೇಟೆಯ ಆಗುಹೋಗುಗಳನ್ನು ಬದಿಯಡ್ಕದಲ್ಲಿರುವ ಪೊಲೀಸ್ ಠಾಣೆಯಲ್ಲಿಯೇ ಗಮನಿಸಲು ಅನುಕೂಲವಾಗುವ ವ್ಯವಸ್ಥೆ ಇದಾಗಿದೆ ಎಂದು ಅವರು ತಿಳಿಸಿದರು. ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿ ಮಾತನಾಡುತ್ತಾ ಕಳ್ಳತನ, ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಸಿಸಿಟಿವಿ ವ್ಯವಸ್ಥೆಯು ಪ್ರಾಧಾನ್ಯತೆಯನ್ನು ಪಡೆಯಲಿದೆ. ದಿನೇ ದಿನೇ ಬೆಳೆಯುತ್ತಿರುವ ಪೇಟೆಯ ಸುರಕ್ಷತೆ ಅನಿವಾರ್ಯವಾಗಿದೆ ಎಂದರು. ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಎಂ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಹಾಜನ ವಿದ್ಯಾಸಂಸ್ಥೆಯ ಪ್ರಬಂಧಕ ಜಯದೇವ ಖಂಡಿಗೆ, ಗ್ರಾಪಂ ಸದಸ್ಯರಾದ ಡಿ.ಶಂಕರ, ಪ್ರೇಮ ಕುಮಾರಿ ಶುಭಾಶಂಸನೆಗೈದರು. ವ್ಯಾಪಾರಿ ಸಂಘಟನಾ ಕಾರ್ಯದರ್ಶಿ ರವಿ ಖಂಡಿಗೆ ಸ್ವಾಗತಿಸಿ, ಕೋಶಾಧಿಕಾರಿ ಪ್ರಶಾಂತ ಪೈ ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss