Thursday, August 11, 2022

Latest Posts

ಕ್ಯಾಲಿಕಟ್‍ ವಿಮಾನ ದುರಂತ: ಕೇರಳ ಮುಖ್ಯಮಂತ್ರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡ ಪ್ರಧಾನಿ ಮೋದಿ

ಕ್ಯಾಲಿಕಟ್‍: ದುಬೈನಿಂದ ಕ್ಯಾಲಿಕಟ್‍ಗೆ ಆಗಮಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ 35 ಅಡಿ ಎತ್ತರದಿಂದ ನೆಲಕ್ಕೆ ಅಪ್ಪಳಿಸಿದೆ. ಪರಿಣಾಮ ವಿಮಾನ ಎರಡು ಭಾಗಗಳಾಗಿತ್ತು. ಆದ್ರೆ ಯಾವುದೇ ಬೆಂಕಿ ಅವಘಢ ಆಗಿಲ್ಲ.
ಕೇರಳದ ವಿಮಾನ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಕೋಝಿಕೋಡ್ ಮತ್ತು ಮಲಪ್ಪುರಂ ಜಿಲ್ಲಾಧಿಕಾರಿಗಳು ಮತ್ತು ಐಜಿ ಅಶೋಕ್ ಯಾದವ್ ಸೇರಿದಂತೆ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.
ಪೈಲಟ್ ಸೇರಿದಂತೆ ಕೆಲವರು ಸಾವನ್ನಪ್ಪಿದ್ದಾರೆ ಎಂದು ದೃಢೀಕರಿಸಿದ ವರದಿಗಳು ಹೊರಬಿದ್ದಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಪಿಣರಾಯಿ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ಸಹಾಯವನ್ನೂ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss