Wednesday, August 10, 2022

Latest Posts

ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು: 4 ಮಿಲಿಯನ್​ ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ, 31 ಜನರು ಬಲಿ

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನ ಅಬ್ಬರಕ್ಕೆ 4 ಮಿಲಿಯನ್​ ಎಕರೆ (1.6 ಮಿಲಿಯನ್​ ಹೆಕ್ಟೇರ್​) ಅರಣ್ಯ ಪ್ರದೇಶ ಅಗ್ನಿಗಾಹುತಿಯಾಗಿದೆ. ಬೆಂಕಿಯ ಕೆನ್ನಾಲಗೆಗೆ 31 ಜನರು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಮಂದಿ ತಮ್ಮ ಮನೆಗಳನ್ನ ಕಳೆದುಕೊಂಡು ಸ್ಥಳಾಂತರಗೊಂಡಿದ್ದಾರೆ.
ಆಗಸ್ಟ್ 15ರಿಂದ ಈವರೆಗೆ ಕ್ಯಾಲಿಫೋರ್ನಿಯಾದಲ್ಲಿನ ಕಾಳ್ಗಿಚ್ಚು 3.98 ಮಿಲಿಯನ್ ಎಕರೆಯಷ್ಟು ಅಂದರೆ 15,500 ಚದರ ಕಿ.ಮೀ. ಅರಣ್ಯ ಪ್ರದೇಶವನ್ನು ಸುಟ್ಟುಹಾಕಿದೆ. ಕ್ಯಾಲಿಫೋರ್ನಿಯಾ ಇತಿಹಾಸದಲ್ಲಿ ಇದು ಹಿಂದೆಂದೂ ಸಂಭವಿಸಿಲ್ಲ ಎಂದು ಕ್ಯಾಲಿಫೋರ್ನಿಯಾದ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಜೊನಾಥನ್ ಕಾಕ್ಸ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss