Sunday, August 14, 2022

Latest Posts

ಕ್ವಾರಂಟೈನ್‌ಗೆ ಒಳಪಟ್ಟ ಸುರತ್ಕಲ್ ಗುಡ್ಡೆಕೊಪ್ಲ ಪ್ರದೇಶಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ

ಸುರತ್ಕಲ್: ಸುರತ್ಕಲ್ ಗುಡ್ಡೆಕೊಪ್ಲ ಕ್ವಾರಂಟೈನ್‌ಗೆ ಒಳಪಟ್ಟ ಪ್ರದೇಶಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಶನಿವಾರ ಪಡಿತರ ಕಿಟ್ ವಿತರಿಸಿದರು. ಈ ಸಂದರ್ಭ ಸ್ಥಳೀಯರೊಂದಿಗೆ ಚರ್ಚಿಸಿದ ಅವರು ಕ್ವಾರಂಟೈನ್ ಸಂದರ್ಭ ಸಹಕರಿಸುವಂತೆ ವಿನಂತಿಸಿದರು.
ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿರುವ ಮೂಲದ ಬಗ್ಗೆ ವೈದ್ಯರು ಮಾಹಿತಿ ಕಲೆ ಹಾಕುತ್ತಿದ್ದಾರೆ.ಊರಿನ ಜನತೆಗೆ ಯಾವುದೇ ಸಮಸ್ಯೆ ಎದುರಾಗದಂತೆ ಪಡಿತರ, ತರಕಾರಿ ಮತ್ತಿತರ ದಿನಬಳಕೆಯ ವಸ್ತು ವಿತರಿಸಲಾಗುದು ಎಂದರು. ಮಾಧ್ಯಮಮೊಂದಿಗೆ ಮಾತನಾಡಿದ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಕಿ ಪ್ರಥಮ ಕೇಸ್ ಆಗಿದೆ. ಗಂಭೀರವಾಗಿ ತೆಗೆದುಕೊಳ್ಳುವ ಮೂಲಕ ಹರಡಂತೆ ಕ್ರಮಕ್ಕೆ ಸೂಚಿಸಲಾಗಿದೆ ಎಂದರು. ಮಂಗಳೂರು ಉತ್ತರ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಕಾರ್ಪೊರೇಟರ್ ನಯನ ಆರ್.ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss