Tuesday, June 28, 2022

Latest Posts

ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿದವರಿಗೂ ಕೊರೋನಾ: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೊಸ ಮಂಡೆಬಿಸಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮುಂಬೈನಿಂದ ಆಗಮಿಸಿ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿದವರಿಗೂ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ಈಗ ಜಿಲ್ಲಾಡಳಿತಕ್ಕೆ ಹೊಸ ಸಮಸ್ಯೆಯಾಗಿದೆ.

ಇದರಿಂದಾಗಿ ಪಾಸಿಟಿವ್ ಪ್ರಕರಣ ಪತ್ತೆಯಾದವರ ಮನೆಯ ಪ್ರದೇಶ ಸೀಲ್‌ಡೌನ್ ಮಾಡುವುದು ಅನಿವಾರ್ಯ. ಶುಕ್ರವಾರವೂ ಇಂತಹುದೇ ಪ್ರಕರಣಕ್ಕೆ ಸಂಬಂಧಿಸಿ ಬಡಗುಳಿಪಾಡಿ ಗ್ರಾಮದ ಸರಪಾಡಿ ಪ್ರದೇಶವನ್ನು ಕಂಟೈನ್‌ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಮುಂಬೈನಿಂದ ಮೇ ೧೪ರಂದು ಆಗಮಿಸಿದ ೫೦ ವರ್ಷದ ಪುರುಷನಿಗೆ (ರೋಗಿ ಸಂಖ್ಯೆ ೨೪೭೩)ಗುರುವಾರ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ಬಡಗುಳಿಪಾಡಿ ಗ್ರಾಮದ ಸರಪಾಡಿ ಪ್ರದೇಶವನ್ನು  ಕಂಟೈನ್‌ಮೆಂಟ್ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಇಲ್ಲಿಗೆ ಮಂಗಳೂರು ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss