Tuesday, August 16, 2022

Latest Posts

ಕ್ಷೇತ್ರದ ಮತದಾರರ ಋಣ ತೀರಿಸುವಂತೆ ಕೆಲಸ ಮಾಡುವೆ: ಮುನಿರತ್ನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾರಣರಾದ ಮತದಾರರಿಗೆ ಧನ್ಯವಾದಗಳು. ಕ್ಷೇತ್ರದ ಮತದಾರರ ಋಣ ತೀರಿಸುವಂತೆ ಕೆಲಸ ಮಾಡುವುದಾಗಿ ಆರ್ ಆರ್ ನಗರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದಂತ ಬಿಜೆಪಿಯ ಮುನಿರತ್ನ ತಿಳಿಸಿದ್ದಾರೆ.
ಹ್ಯಾಟ್ರಿಕ್ ಗೆಲುವಿನ ನಗೆಯನ್ನು ಬೀರಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಮುನಿರತ್ನ ಅವರು, ದಿನದ 20 ಗಂಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುವಂತೆ ಕೆಲಸ ಮಾಡುವೆ. ಕ್ಷೇತ್ರದ ಜನರ ಋಣವನ್ನು ತೀರಿಸುವಂತೆ ಸೇವೆ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ಸಚಿವಸ್ಥಾನ ನೀಡುವುದು, ಬಿಡೋದು ಸಿಎಂಗೆ ಬಿಟ್ಟ ವಿಚಾರವಾಗಿದೆ. ಅವರು ಯಾವುದೇ ಸಚಿವಸ್ಥಾನ ನೀಡಿದರೂ ನಿಭಾಯಿಸಿಕೊಂಡು ಹೋಗುತ್ತೇನೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೂ ಒಬ್ಬ ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಕೆಲಸ ಮಾಡುವುದಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss