Monday, July 4, 2022

Latest Posts

ಖಾತೆ ಬದಲಾವಣೆ ಯಾವುದೇ ಅಸಮಾಧಾನವಿಲ್ಲ, ಎಲ್ಲವೂ ಸಿ.ಎಂ.ಅವರಿಗೆ‌ ಬಿಟ್ಟ‌ ಪರಮಾಧಿಕಾರ: ಸಚಿವ ಆನಂದ್ ಸಿಂಗ್

ಹೊಸದಿಗಂತ ವರದಿ ಬಳ್ಳಾರಿ:

ಖಾತೆಯ ಬದಲಾವಣೆ ಕುರಿತು ಯಾವುದೇ ಅಸಮಾಧಾನವಿಲ್ಲ. ಸಿ.ಎಂ. ಆದೇಶವನ್ನು ನಾನಲ್ಲ ಎಲ್ಲರೂ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಖಾತೆ ಸಚಿವ ಆನಂದ್ ಸಿಂಗ್ ಹೇಳಿದರು.
ಹೊಸಪೇಟೆ ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಸೋಮವಾರ ಮಾತನಾಡಿದ ಅವರು, ಖಾತೆಯ ಬದಲಾವಣೆ ಕುರಿತು ಯಾವುದೇ ಅಸಮಾಧಾನವಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಪಾಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸದ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸಲು ಬಂದಿರುವೆ. ಪದೇ ಪದೆ ಖಾತೆ ಬದಲಾವಣೆ ಕುರಿತು ಮುಖ್ಯಮಂತ್ರಿಗಳನ್ನೇ ಕೇಳಬೇಕು. ನಾಡಿದ್ದು ಬೆಂಗಳೂರಿಗೆ ಹೋಗುವೆ ಎಂದರು. ವಿಜಯನಗರ ನೂತನ ಜಿಲ್ಲೆ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss