Friday, July 1, 2022

Latest Posts

ಖಾತೆ ಮರು ಹಂಚಿಕೆ ಗೊಂದಲ ಪರಿಹಾರಕ್ಕೆ ಸಚಿವರ ಜೊತೆ ಸಿಎಂ ಬಿಎಸ್’ವೈ ಚರ್ಚೆ

ಹೊಸದಿಗಂತ ವರದಿ,ಉಡುಪಿ:

ಖಾತೆ ಮರು ಹಂಚಿಕೆ ವಿಚಾರದಲ್ಲಿ ಸಣ್ಣ ಗೊಂದಲವಿರುವುದು ನಿಜ. ಬಿಕ್ಕಟ್ಟು ಪರಿಹಾರಕ್ಕೆ ಮುಖ್ಯಮಂತ್ರಿಗಳಿಂದ ಕರೆ ಬಂದಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾರವಾರದಲ್ಲಿ ಇದ್ದಾಗ ಸಿಎಂ ಕರೆ ಮಾಡಿದ್ದರು. ತುರ್ತಾಗಿ ಬರಲು ಹೇಳಿದ್ದಾರೆ. ಹಾಗಾಗಿ ರಾತ್ರಿ 8ಗಂಟೆಗೆ ಬೆಂಗಳೂರಿಗೆ ಹೊರಟಿದ್ದೇನೆ. ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಈ ಬಗ್ಗೆ ಕರೆ ಮಾಡಿದ್ದೇನೆ ಎಂದರು.

ಖಾತೆಯ ಗೊಂದಲದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಈಗಾಗಲೇ ಎಲ್ಲರ ಜೊತೆ ಒಂದು ಸುತ್ತು ಮಾತನಾಡಿ ಮನವರಿಕೆ ಮಾಡಿದ್ದೇನೆ. ಆನಂದ್ ಸಿಂಗ್ ಅವರಿಗೆ ಕರೆ ಮಾಡಿದ್ದೆ, ಅವರ ಸಂಪರ್ಕ ಸಾಧ್ಯವಾಗಿಲ್ಲ. ಶಾಸಕ ರಾಜೇಗೌಡ ಮತ್ತು ಎಂಟಿಬಿ ನಾಗರಾಜ್ ಜೊತೆ ಮಾತನಾಡಿದ್ದೇನೆ. ದುಡುಕಿ ಯಾವುದೇ ತಪ್ಪು ನಿರ್ಧಾರ ಕೈಗೊಳ್ಳಬೇಡಿ ಎಂದು ಹೇಳಿದ್ದೇನೆ. ಬೆಂಗಳೂರು ತಲುಪಿದ ನಂತರ ಎಲ್ಲರ ಜೊತೆ ಸೇರಿ ಮಾತನಾಡುತ್ತೇನೆ ಎಂದು ಅಶೋಕ್ ಹೇಳಿದರು.

ಎಲ್ಲ ಗೊಂದಲಗಳು ಮೊನ್ನೆಯೇ ಬಗೆಹರಿದಿತ್ತು. ಹೊಸದಾಗಿ ಖಾತೆ ಬದಲಾವಣೆ ಆದ ಕಾರಣ ಮತ್ತೆ ಗೊಂದಲ ಉಂಟಾಗಿದೆ. ರಾಜಕೀಯದಲ್ಲಿ ಇದೆಲ್ಲಾ ಸರ್ವೇ ಸಾಮಾನ್ಯ. ಅಸಮಾಧಾನ, ಬೇಗುದಿ, ಖಾತೆ ಕ್ಯಾತೆ ಇದೆಲ್ಲ ಸರ್ವೇ ಸಾಮಾನ್ಯ. ಮುಖ್ಯಮಂತ್ರಿಗಳು ಇದೆಲ್ಲವನ್ನು ಎದುರಿಸಲು ಸಮರ್ಥರಿದ್ದಾರೆ, ನಾವೆಲ್ಲ ಅವರ ಜೊತೆಗಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss